More

    ಅಬಕಾರಿ ನೀತಿ ಪ್ರಕರಣ; ಪ್ರತಿಭಟನೆ ನಡುವೆಯೂ ಸಂಸದನ ಬಂಧನ

    ನವದೆಹಲಿ: ದೆಹಲಿ ಸರ್ಕಾರದ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್​ ಸಂಸದ ಸಂಜಯ್​ ಸಿಂಗ್​ ಅವರನ್ನು ಜಾರಿ ನಿರ್ದೇಶನಾಲಯ ಇಂದು ಬಂಧಿಸಿದೆ. ಆಪ್​ ಬೆಂಬಲಿಗರ ಪ್ರತಿಭಟನೆ, ವಿರೋಧದ ನಡುವೆಯೂ ಸಿಂಗ್ ಅವರನ್ನು ಅವರ ದೆಹಲಿಯ ನಿವಾಸದಿಂದ ಬಂಧಿಸಿ ಕರೆದೊಯ್ಯಲಾಗಿದೆ.

    ಈ ಮೂಲಕ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಎರಡನೇ ಅತ್ಯಂತ ಪ್ರಭಾವಿ ವ್ಯಕ್ತಿ ಇವರಾಗಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರನ್ನು ಈಗಾಗಲೇ ಬಂಧಿಸಲಾಗಿದೆ.

    ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ನಿವಾಸದ ಮೇಲೆ ಇಂದು ದಾಳಿ ನಡೆಸಿದ್ದರು. ತೀವ್ರ ವಿಚಾರಣೆ ನಡೆಸಿದ ಬೆನ್ನಿಗೇ ಅವರನ್ನು ವಶಕ್ಕೆ ಪಡೆದು ಬಂಧಿಸಿದ್ದರು. ಈ ವಿಷಯ ಎಲ್ಲೆಡೆ ಬಹಿರಂಗ ಆಗಲಾರಂಭಿಸುತ್ತಿದ್ದಂತೆ ಅವರ ನಿವಾಸದ ಬಳಿ ಆಪ್ ಕಾರ್ಯಕರ್ತರು, ಬೆಂಬಲಿಗರು ಜಮಾಯಿಸಿದ್ದಾರೆ. ಈ ಬಂಧವನ್ನು ವಿರೋಧಿಸಿ ಅವರು ಘೋಷಣೆಗಳನ್ನು ಕೂಗಿದ್ದರು.

    ಇದನ್ನೂ ಓದಿ: ಇಬ್ಬರು ಮಕ್ಕಳನ್ನು ನೋಡಿಕೊಳ್ಳೋ ಆಯಾಗೆ 80 ಲಕ್ಷ ರೂ. ಸಂಬಳ ಕೊಡ್ತಾರಂತೆ!

    ಸಂಜಯ್ ಸಿಂಗ್ ಅವರು ಇದೇ ಮೇ ತಿಂಗಳಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸು ಕಾರ್ಯದರ್ಶಿ ಟಿ.ವಿ.ಸೋಮನಾಥನ್ ಅವರಿಗೆ ಪತ್ರ ಬರೆದಿದ್ದರು. ಜಾರಿ ನಿರ್ದೇಶನಾಲಯದ ನಿರ್ದೇಶಕರು ಮತ್ತು ಸಹಾಯಕ ನಿರ್ದೇಶಕರು ಯಾವುದೇ ಆಧಾರವಿಲ್ಲದೆ ಉದ್ದೇಶಪೂರ್ವಕವಾಗಿ ಮದ್ಯ ಹಗರಣಕ್ಕೆ ತಮ್ಮ ಹೆಸರನ್ನು ಜೋಡಿಸಿದ್ದಾರೆ. ಆ ಮೂಲಕ ತಮ್ಮ ಸಾರ್ವಜನಿಕ ವರ್ಚಸ್ಸಿಗೆ ಕಳಂಕ ತಂದಿದ್ದಾರೆ ಮತ್ತು ಮಾನಹಾನಿ ಮಾಡಿದ್ದಾರೆ ಎಂದು ಸಂಜಯ್ ಸಿಂಗ್ ಆರೋಪಿಸಿದ್ದರು.

    ಸಿನಿಮಾದ ಹಲವರಿಗೆ ಸಾಹಿತ್ಯದ ಅರಿವಿಲ್ಲ; ನೀವಂದ್ಕೊಂಡಷ್ಟು ಮೂರ್ಖರಲ್ಲ ಸಿನಿಮಾದವರು: ಸಾಹಿತಿ-ನಿರ್ದೇಶಕರ ಮಧ್ಯೆ ಜಾತಿಸಂಘರ್ಷ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts