More

    ದೆಹಲಿ ಅಬಕಾರಿ ನೀತಿ ಪ್ರಕರಣ: ಹೈದರಾಬಾದ್​ ಮೂಲದ ಔಷಧ ಕಂಪನಿಯ ನಿರ್ದೇಶಕರ ಬಂಧನ

    ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣ (Delhi Liquor Policy Case)ದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (Enforcement Directorate)ವು ಹೈದರಾಬಾದ್​ ಮೂಲದ ಔಷಧ ಕಂಪನಿಯ ಉನ್ನತ ಅಧಿಕಾರಿಯನ್ನು ಬಂಧಿಸಿದೆ.

    ಶರತ್​ ರೆಡ್ಡಿ ಬಂಧಿತ ಅಧಿಕಾರಿ. ಇವರು ಅರಬಿಂದೋ ಫಾರ್ಮಾ ಕಂಪನಿಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಅಧಿಕಾರಿಗಳ ಬಂಧನಕ್ಕೆ ಒಳಗಾಗಿರುವ ಎರಡನೇ ವ್ಯಕ್ತಿ ಇವರಾಗಿದ್ದಾರೆ.

    ಈ ಹಿಂದೆ ಶರತ್​ ರೆಡ್ಡಿ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಡಿ ಅಧಿಕಾರಿಗಳ ತಂಡ ದಾಳಿ ಮಾಡಿ, ಶೋಧ ಕಾರ್ಯ ನಡೆಸಿ, ಶರತ್​ ಅವರನ್ನು ಎರಡು ಬಾರಿ ವಿಚಾರಣೆ ನಡೆಸಿತ್ತು. ಇದೀಗ ಅವರನ್ನು ಬಂಧಿಸಿದೆ.

    ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಂತೆ ಇಲ್ಲಿಯವರೆಗೆ ಅನೇಕ ಬಾರಿ ಇಡಿ ದಾಳಿ ನಡೆಸಿದೆ. ಕಳೆದ ಸೆಸ್ಟೆಂಬರ್​ನಲ್ಲಿ ಇಂಡೋಸ್ಪಿರಿಟ್​ ಹೆಸರಿನ ಮದ್ಯ ತಯಾರಿಕ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸಮೀರ್​ ಮಹೇಂದ್ರು ಎಂಬುವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

    ಏನಿದು ಕೇಸ್​?
    ದೆಹಲಿ ಸರ್ಕಾರ (Delhi Govt) 2021-22ನೇ ಸಾಲಿನ ಅಬಕಾರಿ ನೀತಿಯನ್ನು ರೂಪಿಸಿತ್ತು. ಈ ನೀತಿಯ ಅನ್ವಯ 468 ಖಾಸಗಿ ಬಾರ್‌ಗಳಿಗೆ ಅನುಮತಿ ನೀಡಲಾಗಿತ್ತು. ಈ ಅನುಮತಿ ನೀಡುವ ಸಮಯದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ. ಈ ಕುರಿತು ದೆಹಲಿಯ ಉಪರಾಜ್ಯಪಾಲ ವಿ.ಕೆ.ಸಕ್ಸೇನಾ (Vinai Kumar Saxena) ಅವರು ಕಳೆದ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು. ಸಚಿವ ಮನೀಶ್ ಸಿಸೋಡಿಯಾ (Manish Sisodia) ಕೂಡ ಇದಕ್ಕೆ ಸಮ್ಮತಿ ಸೂಚಿಸಿದ್ದರು.

    ಇದೇ ಸಂದರ್ಭದಲ್ಲಿ 11 ಅಬಕಾರಿ ಅಧಿಕಾರಿಗಳನ್ನು ಕೂಡ ಅಮಾನತು ಮಾಡಲಾಗಿತ್ತು. ಮದ್ಯದ ಲೈಸೆನ್ಸ್‌ ಪಡೆದುಕೊಂಡವರಿಗೆ ಟೆಂಡರ್‌ ನಂತರ ಅನೇಕ ಸವಲತ್ತುಗಳನ್ನು ನೀಡಲಾಗಿದೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಮದ್ಯದ ವ್ಯಾಪಾರಿ ಸಮೀರ್ ಮಹೇಂದ್ರು ಅವರು ಸಿಸೋಡಿಯಾ ಅವರ ಸಹಚರರಿಗೆ 5 ಕೋಟಿ ರೂ ಪಾವತಿಸಿದ್ದಾರೆ ಎಂದು ಸಿಬಿಐ 2021-22ರ ಅಬಕಾರಿ ನೀತಿ ರಚನೆ ಮತ್ತು ಅನುಷ್ಠಾನದ ಅಡಿ ಎಫ್‌ಐಆರ್​ ದಾಖಲಿಸಿದೆ. ಈ ಪ್ರಕರಣದಲ್ಲಿ ಒಟ್ಟು 13 ಜನರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದ್ದು, ಈ ಪೈಕಿ ಮನೀಷ್ ಸಿಸೋಡಿಯಾ ಮೊದಲ ಆರೋಪಿಯಾಗಿದ್ದಾರೆ. (ಏಜೆನ್ಸೀಸ್​)

    ವಿಜಯವಾಣಿ ಅಚ್ಚಗನ್ನಡ ಅಭಿಯಾನ: ಬನ್ನಿ ಭಾಗವಹಿಸಿ ಬಹುಮಾನ ಗೆಲ್ಲಿ

    ಸಾನಿಯಾ ಮಿರ್ಜಾ-ಶೋಯಿಬ್​ ಮಲಿಕ್​ ಡಿವೋರ್ಸ್​ ವದಂತಿ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಾನಿಯಾ ಫ್ರೆಂಡ್​!

    ಸೂರ್ಯಕುಮಾರ್​ರನ್ನು ಸುಲಭವಾಗಿ ಔಟ್​ ಮಾಡುವುದು ಹೇಗೆ? ಪಾಕ್​ ಮಾಜಿ ಆಟಗಾರ ಕೊಟ್ಟ ಸಲಹೆ ಇದು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts