ನೀಲಿಚಿತ್ರ ನಟಿಯಂತೆ ಡ್ರೆಸ್‌ ಮಾಡಲು ಪತ್ನಿಗೆ ಒತ್ತಾಯಿಸಿದ ಪತಿ ಅರೆಸ್ಟ್​​

mobile
Published on

ನವದೆಹಲಿ: ಅಶ್ಲೀಲ ಚಿತ್ರ ನೋಡುವಂತೆ ಮತ್ತು ಪೋರ್ನ್‌ಸ್ಟಾರ್‌ನಂತೆ ಡ್ರೆಸ್ ಮಾಡುವಂತೆ ಪತ್ನಿಗೆ ಒತ್ತಾಯಿಸಿದ್ದಕ್ಕಾಗಿ ದೆಹಲಿ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ.

ಪೂರ್ವ ದೆಹಲಿಯಲ್ಲಿ ಈ ಘಟನೆ ನಡೆದಿದ್ದು, 30 ವರ್ಷದ ಮಹಿಳೆ ತನ್ನ ಪತಿ ಮತ್ತು ಆತನ ಕುಟುಂಬದ ವಿರುದ್ಧ ಸೋಮವಾರ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Mobile App

2020ರಲ್ಲಿ ದಂಪತಿ ವಿವಾಹವಾಗಿದ್ದರು. ವ್ಯಕ್ತಿ ನೋಯ್ಡಾದ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ಪತಿ ಮತ್ತು ಆತನ ಕುಟುಂಬದವರು ವರದಕ್ಷಿಣೆಗಾಗಿ ಒತ್ತಾಯಿಸಿದ್ದಾರೆ. ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕುಳ ನೀಡುತ್ತಿದ್ದಾರೆ. ತನ್ನ ಪತಿ ಅಶ್ಲೀಲ ವ್ಯಸನಿಯಾಗಿದ್ದಾನೆ ಎಂದು ಪೂರ್ವ ರೋಹ್ತಾಶ್ ನಗರದ ನಿವಾಸಿಯಾಗಿರುವ ಮಹಿಳೆ ತನ್ನ ದೂರಿನಲ್ಲಿ ಆರೋಪಿಸಿದ್ದಾಳೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಶ್ಲೀಲ ಚಿತ್ರಗಳನ್ನು ವೀಕ್ಷಿಸಲು ಒತ್ತಾಯಿಸುತ್ತಿದ್ದ ಮತ್ತು ತನ್ನ ಪೋರ್ನ್ ಸ್ಟಾರ್‌ನಂತೆ ಡ್ರೆಸ್ ಮಾಡುವಂತೆ ಒತ್ತಾಯಿಸಿದ್ದಾನೆ. ಕಳೆದ ಕೆಲವು ದಿನಗಳಿಂದ ಜಗಳವಾಡುತ್ತಿದ್ದರು ಎಂದು ದೂರುದಾರರು ಆರೋಪಿಸಿದ್ದಾರೆ. ಆಕೆಯ ವಿರುದ್ಧ ಅಸ್ವಾಭಾವಿಕ ಅಪರಾಧಗಳನ್ನು ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಐಪಿಸಿ ಸೆಕ್ಷನ್ 498 ಎ (ಗಂಡ ಅಥವಾ ಪತಿ ಸಂಬಂಧಿ ಮಹಿಳೆಯನ್ನು ಕ್ರೌರ್ಯಕ್ಕೆ ಒಳಪಡಿಸಿದರೆ), 406 (ಕ್ರಿಮಿನಲ್ ನಂಬಿಕೆಯ ಉಲ್ಲಂಘನೆ), 377 (ಅಸ್ವಾಭಾವಿಕ ಅಪರಾಧ) ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆತನೊಂದಿಗೆ ವಾಸಿಸುತ್ತಿರುವ ಆತನ ಕುಟುಂಬ ಸದಸ್ಯರನ್ನು ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ತನಿಖೆ ಆರಂಭಿಕ ಹಂತದಲ್ಲಿದೆ. ಎಲ್ಲ ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ. ಪ್ರಕರಣದ ಮುಂದಿನ ಅಗತ್ಯ ಕ್ರಮಕ್ಕಾಗಿ ಡಿಜಿಟಲ್ ಪುರಾವೆಗಳು ಮತ್ತು ಇತರ ಪುರಾವೆಗಳನ್ನು ಪಡೆದುಕೊಳ್ಳಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net