

ನವ ದೆಹಲಿ: ಬೌದ್ಧ ಧರ್ಮಕ್ಕೆ 10 ಸಾವಿರ ಹಿಂದುಗಳನ್ನು ಸಾಮೂಹಿಕವಾಗಿ ಮತಾಂತರ ಮಾಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಆಮ್ ಆದ್ಮಿ ಸರ್ಕಾರದ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ದೆಹಲಿಯಲ್ಲಿ ನಡೆದ ಸಾಮೂಹಿಕ ಮಂತಾರದಲ್ಲಿ ಆಪ್ ಪಕ್ಷದ ಸಚಿವ ರಾಜೇಂದ್ರ ಪಾಲ್ ಭಾಗವಹಿಸಿದ್ದರು. ಮಂತಾತರ ಮಾಡುವ ಸಂದರ್ಭದಲ್ಲಿ ಹಿಂದೂ ದೇವತೆಗಳನ್ನು ನಂಬಬಾರದು. ಹಿಂದು ದೇವೆತೆಗಳನ್ನು ಪೂಜಿಸುವುದಿಲ್ಲ ಎಂಬುದಾಗಿ ಪ್ರತಿಜ್ಞೆ ಮಾಡಿಸಲಾಗಿತ್ತು. ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಸಾಮೂಹಿಕವಾಗಿ ನಡೆದ ಮತಾಂತರ ಕಾರ್ಯಕ್ರಮಕ್ಕೆ ದೇಶದಾದ್ಯಂತ ವ್ಯಾಪಕ ಟೀಕೆ ಎದುರಾಗಿತ್ತು.
ಹಿಂದೂ ಧರ್ಮವನ್ನು ಖಂಡಿಸಿ ಮತ್ತು ಬೌದ್ಧ ಧರ್ಮಕ್ಕೆ ಮತಾಂತರ ಕಾರ್ಯಕ್ರಮದಲ್ಲಿ ಸಚಿವ ರಾಜೇಂದ್ರ ಪಾಲ್ ಗೌತಮ್ ಉಪಸ್ಥಿತಿ ಗದ್ದಲಕ್ಕೆ ಕಾರಣವಾಗಿತ್ತು. ಇದೀಗ ಅವರು ರಾಜೀನಾಮೆ ನೀಡಿ ಅರವಿಂದ್ ಕೇಜ್ರಿವಾಲ್ ಸಂಪುಟದಿಂದ ಹಿಂದೆ ಸರಿದಿದ್ದಾರೆ.
ಬಿಜೆಪಿಯವರು ನಾನು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದನ್ನು ವಿವಾದದ ವಿಷಯವನ್ನಾಗಿ ಮಾಡಿಕೊಂಡಿದ್ದಾರೆ. ಈ ಮೂಲಕ ನನ್ನನ್ನು ಹಾಗೂ ನನ್ನ ಪಕ್ಷವನ್ನು ಅವಮಾನಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ರಾಜೀನಾಮೆ ಸಲ್ಲಿಸಿದ ಬಳಿಕ ರಾಜೇಂದ್ರ ಪಾಲ್ ಹೇಳಿದ್ದಾರೆ.