More

  ಕೇಜ್ರಿವಾಲ್​ ಬಂಧನ ಖಂಡಿಸಿ ಪ್ರತಿಭಟನೆ; ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್ ಅರೆಸ್ಟ್​

  ನವದೆಹಲಿ: ಅಬಕಾರಿ ನೀತಿಯಲ್ಲಿನ ಜಾರಿಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಬಂಧನ ಖಂಡಿಸಿ ಆಮ್​ ಆದ್ಮಿ ಪಕ್ಷ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್​ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

  ಕಾನೂನುಬಾಹಿರವಾಗಿ ಕೇಜ್ರಿವಾಲ್​ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ ಎಂದು ಆರೋಪಿಸಿ ಸಚಿವರಾದ ಅತಿಶಿ ಚೌಧರಿ ಹಾಗೂ ಸೌರಭ್ ಭಾರದ್ವಾಜ್​ ಬೃಹತ್​ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು. ಭದ್ರತೆಯ ದೃಷ್ಠಿಯಿಂದ ಪೊಲೀಸರು ಎಎಪಿ ಕೇಂದ್ರ ಕಚೇರಿಗೆ ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ಮುಚ್ಚಿದ್ದರು.

  ಕೇಜ್ರಿವಾಲ್​ ಬಂಧನ ಖಂಡಿಸಿ ಪ್ರತಿಭಟನಾ ನಿರತರು ಸಚಿವರು ಹಾಗೂ ಮುಖಂಡರು ಬಿಜೆಪಿ ಕೇಂದ್ರ ಕಚೇರಿಯನ್ನು ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾ ನಿರತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪೊಲೀಸರು ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್ ಸೇರಿದಂತೆ ಎಲ್ಲರನ್ನು ವಶಕ್ಕೆ ಪಡೆದಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts