More

    ಕೇರಳದಲ್ಲಿ ಸರಣಿ ಸ್ಫೋಟ: ದೆಹಲಿ, ಮುಂಬೈನಲ್ಲಿ ಹೈ ಅಲರ್ಟ್- ಮೃತರ ಸಂಖ್ಯೆ 2ಕ್ಕೆ ಏರಿಕೆ

    ನವದೆಹಲಿ: ಕೇರಳದ ಕೊಚ್ಚಿ ಸಮೀಪದ ಕಲಮಸ್ಸೆರಿಯಲ್ಲಿ ನಡೆದ ಸರಣಿ ಸ್ಫೋಟಗಳ ನಂತರ, ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಮುಂಬೈನಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

    ಇದನ್ನೂ ಓದಿ: ರೀಲ್ಸ್​ ವೈರಲ್​… ಕಾರ್​ ಸ್ಟಂಟ್​ ಮಾಡಿದ ಮೂವರು ಲಾಕ್​!
    ಸ್ಫೋಟದ ಹಿನ್ನೆಲೆಯಲ್ಲಿ ನಗರದ ಜನನಿಬಿಡ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅದೇ ರೀತಿ ಮುಂಬೈ ಪೊಲೀಸರು ಹಬ್ಬದ ಸೀಸನ್, ಮುಂಬರುವ ಕ್ರಿಕೆಟ್ ಪಂದ್ಯಗಳು ಮತ್ತು ಕೇರಳದಲ್ಲಿ ಇತ್ತೀಚಿನ ಸ್ಫೋಟಗಳನ್ನು ಗಮನದಲ್ಲಿಟ್ಟುಕೊಂಡು ಹೈ ಅಲರ್ಟ್ ಮತ್ತು ಭದ್ರತೆಯನ್ನು ಹೆಚ್ಚಿಸಿದ್ದಾರೆ. ಇಸ್ರೇಲ್-ಹಮಾಸ್ ಯುದ್ಧ ನಡೆಯುತ್ತಿರುವ ಕಾರಣ ಮುಂಬೈನ ಯಹೂದಿ ಕೇಂದ್ರವಾದ ಚಾಬಾದ್ ಹೌಸ್‌ನಲ್ಲಿ ಈಗಾಗಲೇ ಭದ್ರತೆಯನ್ನು ಹೆಚ್ಚಿಸಲಾಗಿದೆ.

    ದೆಹಲಿ ಪೊಲೀಸರ ವಿಶೇಷ ಶಾಖೆಯು ಗುಪ್ತಚರ ಸಂಸ್ಥೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಯಾವುದೇ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತಿದೆ. ಜನನಿಬಿಡ ಸ್ಥಳಗಳಲ್ಲಿ ಭದ್ರತಾ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

    ಕ್ರಿಶ್ಚಿಯನ್ನರ ಪ್ರಾರ್ಥನಾ ಸಭೆ ಆರಂಭವಾದ ಬೆನ್ನಲ್ಲೇ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸರಣಿ ಸ್ಫೋಟದಲ್ಲಿ ಒಬ್ಬರು ಮೃತಪಟ್ಟಿದ್ದು, 36 ಮಂದಿ ಗಾಯಗೊಂಡಿದ್ದಾರೆ. ಕೊಚ್ಚಿಯಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಕಲಮಸ್ಸೆರಿಯಲ್ಲಿ ನಡೆದ ಸಭೆಯಲ್ಲಿ ಸುಮಾರು 2,000 ಜನರು ಭಾಗವಹಿಸಿದ್ದರು. ಅ.27 ರಂದು ಪ್ರಾರಂಭವಾದ ಸಮಾವೇಶಕ್ಕೆ ಭಾನುವಾರ ತೆರೆ ಬೀಳಲಿತ್ತು.

    ದಾಳಿಯಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಲಾಗಿದ್ದು, ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗುವುದು ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಸ್ಫೋಟಕವನ್ನು ಟಿಫಿನ್ ಬಾಕ್ಸ್‌ನಲ್ಲಿ ಇರಿಸಲಾಗಿತ್ತು ಎಂದು ಮೂಲಗಳು ಹೇಳಿವೆ.

    ಸರಣಿ ಸ್ಫೋಟಗಳ ನಂತರ ಗೃಹ ಸಚಿವ ಅಮಿತ್ ಶಾ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು. ಭಯೋತ್ಪಾದನಾ ನಿಗ್ರಹ ತನಿಖೆಗಳು ಮತ್ತು ಕಾರ್ಯಾಚರಣೆಗಳಲ್ಲಿ ಪರಿಣತಿ ಹೊಂದಿರುವ ಎರಡು ಕೇಂದ್ರೀಯ ಏಜೆನ್ಸಿಗಳಾದ ಎನ್‌ಐಎ ಮತ್ತು ಎನ್‌ಎಸ್‌ಜಿ ಮುಖ್ಯಸ್ಥರಿಗೆ ತನಿಖೆಯನ್ನು ಪ್ರಾರಂಭಿಸಲು ತಮ್ಮ ವಿಶೇಷ ತಂಡಗಳನ್ನು ಘಟನಾ ಸ್ಥಳಕ್ಕೆ ಕಳುಹಿಸುವಂತೆ ಷಾ ಆದೇಶಿಸಿದರು.

    ಕೇರಳ ಸ್ಫೋಟ: ಮಾಹಿತಿ ಪಡೆದ ಕೇಂದ್ರ ಗೃಹ ಸಚಿವ ಅಮಿತ್​ ಶಾ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts