More

    ಬೇಬಿ ಕೇರ್​ ಸೆಂಟರ್​ನಲ್ಲಿ ಭೀಕರ ಅಗ್ನಿ ಅವಘಡ; 7 ನವಜಾತ ಶಿಶು ಸಾವು

    ನವದೆಹಲಿ: ಕಳೆದ ಕೆಲ ದಿನಗಳಿಂದ ದೇಶದಲ್ಲಿ ಅಗ್ನಿ ಅವಘಡದ ಘಟನೆಗಳು ಹೆಚ್ಚುತ್ತಿದ್ದು, ಅನೇಕರು ಪ್ರಾಣ ಕೆದುಕೊಂಡಿದ್ದಾರೆ. ಗುಜರಾತ್​ನ ರಾಜ್​ಕೋಟ್​ನಲ್ಲಿರುವ ಗೇಮಿಂಗ್​ ಸೆಂಟರ್​ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 25ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಮಾಸುವ ಮುನ್ನವೇ ರಾಷ್ಟ್ರ ರಾಜಧಾನಿ ನವದೆಹಲಿಯ ಬೇಬಿ ಕೇರ್​ ಸೆಂಟರ್​ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 7 ನವಜಾತ ಶಿಶುಗಳು ಸಜೀವ ದಹನವಾಗಿದೆ.

    ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಈ ದುರ್ಘಟನೆ ಸಂಭವಿಸಿದ್ದು, 12 ಶಿಶುಗಳನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ ಏಳು ಶಿಶುಗಳು ಮೃತಪಟ್ಟಿದ್ದು, ಇನ್ನುಳಿದ ಐದು ಶಿಶುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

    ಇದನ್ನೂ ಓದಿ: ವಿಚ್ಛೇದನ ವದಂತಿ ನಡುವೆಯೇ ಸಾಮಾಜಿಕ ಜಾಲತಾಣದಲ್ಲಿ ಹಾರ್ದಿಕ್​ ಪತ್ನಿಯ ಪೋಸ್ಟ್​ ವೈರಲ್​

    ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ದೆಹಲಿಯ ವಿವೇಕ್ ವಿಹಾರ್‌ನಲ್ಲಿರುವ ಶಿಶುಪಾಲನಾ ಕೇಂದ್ರದಲ್ಲಿ ರಾತ್ರಿ 11:32ರ ಸುಮಾರಿಗೆ ಬೆಂಕಿ ಕಾಣಿಸಿಕೊಂಢಿದ್ದು, ಕ್ಷಣಾರ್ಧದಲ್ಲೇ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ಶಿಶುಗಳನ್ನು ರಕ್ಷಿಸಿ ಬೆಂಕಿಯನ್ನು ನಂದಿಸಿದ್ದಾರೆ. 12 ನವಜಾತ ಶಿಶುಗಳನ್ನು ಕಟ್ಟಡದಿಂದ ಹೊರತೆಗೆಯಲಾಯಿತು, ಆದರೆ ಚಿಕಿತ್ಸೆ ವೇಳೆ 7 ನವಜಾತ ಶಿಶುಗಳು ಮೃತಪಟ್ಟಿವೆ.

    ಆಸ್ಪತ್ರೆಯಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದು ಈವರೆಗೆ ತಿಳಿದು ಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಶೀಘ್ರದಲ್ಲೇ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts