More

    ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕಪಾಳಮೋಕ್ಷ

    ಶಿವಮೊಗ್ಗ: ದೆಹಲಿಯಲ್ಲಿ ಉತ್ತರ ಭಾರತದ ರೈತರು ಚಳವಳಿ ಮಾಡುತ್ತಿದ್ದರೂ ಕೇಂದ್ರ ಸರ್ಕಾರ ಮೊಂಡುತನ ಪ್ರದರ್ಶಿಸುತ್ತಿದೆ. ಈ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿರುವ ಸುಪ್ರೀಂಕೋರ್ಟ್ ಕೇಂದ್ರಕ್ಕೆ ಕಪಾಳಮೋಕ್ಷ ಮಾಡಿದೆ ಎಂದು ಎಚ್.ಆರ್.ಬಸವರಾಜಪ್ಪ ಹೇಳಿದರು.

    ಕೇಂದ್ರ ಸರ್ಕಾರ 3 ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದ್ದು ಅದಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ಕೂಡ ರೈತ ವಿರೋಧಿ ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆಗಳನ್ನು ಪಾಸು ಮಾಡಿದೆ. ಈ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸುತ್ತಿದ್ದರೂ ಪ್ರಯೋಜನ ಆಗಿಲ್ಲ. ಕೇಂದ್ರ ಸರ್ಕಾರ ಮತ್ತು ರೈತರ ಮಧ್ಯೆ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಸುಪ್ರೀಂ ಮಧ್ಯ ಪ್ರವೇಶಿಸಿರುವುದು ರೈತರಿಗೆ ಸಿಕ್ಕ ಜಯ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು. .

    ರಾಜ್ಯದಲ್ಲಿ ರೈತರ ಚಳವಳಿ ಕಾವು ಕಳೆದುಕೊಂಡಿಲ್ಲ. ಡಿ.25ರಂದು ರಾಜ್ಯದ ರೈತರು ದೆಹಲಿಗೆ ತೆರಳಲಿದ್ದು ಅಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸಲಿದ್ದೇವೆ. ಶಿವಮೊಗ್ಗದಿಂದ ಕನಿಷ್ಠ 100 ರೈತರು ತೆರಳಲಿದ್ದೇವೆ ಎಂದರು.

    ರಾಜ್ಯ ಉಪಾಧ್ಯಕ್ಷ ಹಿಟ್ಟೂರು ರಾಜು, ಜಿಲ್ಲಾಧ್ಯಕ್ಷ ಎಸ್.ಶಿವಮೂರ್ತಿ, ಕೆ.ರಾಘವೇಂದ್ರ, ಪಿ.ಡಿ.ಮಂಜಪ್ಪ, ಡಿ.ಎಚ್.ರಾಮಚಂದ್ರ, ಎಂ.ಡಿ.ನಾಗರಾಜ್ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts