More

    ಕೇಂದ್ರ ಗೃಹ ಸಚಿವ ಅಮಿತ್​ ಷಾ ನಿವಾಸದ ಎದುರು ಮೆರವಣಿಗೆ ನಡೆಸಲು ಅನುಮತಿ ನಿರಾಕರಿಸಿದ ಪೊಲೀಸರು

    ನವದೆಹಲಿ: ಪೌರತ್ವ ತಿದ್ದುಪಡಿ ಜಾರಿ ಕಾಯ್ದೆ ವಿರೋಧಿಸಿ ಶಾಹೀನ್​ ಬಾಘ್​​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರಿಗೆ ಕೇಂದ್ರ ಗೃಹ ಸಚಿವ ಅಮಿತ್​ ಷಾ ನಿವಾಸದ ಎದುರು ಮೆರವಣಿಗೆ ನಡೆಸಲು ಪೊಲೀಸರು ಅವಕಾಶ ನಿರಾಕರಿಸಿದ್ದಾರೆ.

    ಪ್ರತಿಭಟನಾಕಾರರಿಗೆ ಮೆರವಣಿಗೆ ನಡೆಸಲು ಅವಕಾಶ ನಿರಾಕರಿಸಿದ ಹಿನ್ನೆಲೆಯಲ್ಲಿ ಶಾಹೀನ್​ಬಾಗ್​ನಲ್ಲಿಯೇ ಪ್ರತಿಭಟನೆ ಮುಂದುವರೆಸುವುದಾಗಿ ಪ್ರತಿಭಟನಾಕರರು ತಿಳಿಸಿದ್ದಾರೆ.

    ಪ್ರತಿಭಟನಾಕಾರರು ಮೆರವಣಿಗೆಯಲ್ಲಿ ತೆರಳಿ ಗೃಹ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ನಿರ್ಧರಿಸಿದ್ದರು, ಆದರೆ ಗೃಹ ಸಚಿವರ ಕಚೇರಿಯಿಂದ ಅನುಮತಿ ಸಿಗದ ಹಿನ್ನೆಲೆಯಲ್ಲಿ ಮೆರವಣಿಗೆಗೆ ಅವಕಾಶ ನೀಡಲಿಲ್ಲ ಎಂದು ಡಿಸಿಪಿ (ಆಗ್ನೇಯ) ಆರ್‌ಪಿ ಮೀನಾ ಹೇಳಿದ್ದಾರೆ.

    ಕಾನೂನು ಉಲ್ಲಂಘಿಸದೆ ಶಾಂತಿಯುತವಾಗಿ ಮೆರವಣಿಗೆ ನಡೆಸುತ್ತೇವೆ ಎಂದು ಪ್ರತಿಭಟನೆ ನಡೆಸುತ್ತಿದ್ದ ಹಲವು ಮಹಿಳೆಯರು ಕೋರಿದರು ಪೊಲೀಸರು ಅನುಮತಿ ನೀಡಲು ನಿರಾಕರಿಸಿದರು.

    ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಕಿರುಕುಳಕ್ಕೆ ತುತ್ತಾಗಿ ಬರುವ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ತಿದ್ದುಪಡಿ ಕಾಯ್ದೆ ಜಾರಿಗೆ ತರುತ್ತಿದ್ದಂತೆ ರಾಷ್ಟ್ರದಲ್ಲಿ ಪ್ರತಿಭಟನೆ ಆರಂಭವಾಯಿತು. ನವದೆಹಲಿಯ ಶಾಹೀನ್​ಬಾಗ್​​ನಲ್ಲಿ ಹಲವು ದಿನಗಳಿಂದ ಪತ್ರಿಭಟನೆ ನಡೆಯುತ್ತಿದೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts