More

    ದೆಹಲಿ ವಿಧಾನಸಭೆಯಲ್ಲಿ ಶೂನ್ಯ ಸಾಧನೆ ಮಾಡಿದ ದೆಹಲಿ ಕಾಂಗ್ರೆಸ್​ ಘಟಕದಲ್ಲಿ ಭಾರಿ ಬದಲಾವಣೆ

    ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಶೂನ್ಯ ಸಾಧನೆ ಮಾಡಿರುವ ಕಾಂಗ್ರೆಸ್​ ಪಕ್ಷ ಸೋಲಿಗೆ ಕಾರಣ ಹುಡುಕುವ ಕೆಲಸಕ್ಕೆ ಕೈಹಾಕಿದೆ.

    ದೆಹಲಿ ವಿಧಾನಸಭೆಯಲ್ಲಿ 2ನೇ ಬಾರಿಗೆ ಅತ್ಯಂತ ಹಳೇ ಪಕ್ಷವಾದ ಕಾಂಗ್ರೆಸ್​ ಶೂನ್ಯ ಫಲಿತಾಂಶ ಪಡೆದಿರುವುದು ಪಕ್ಷಕ್ಕೆ ಮುಜುಗರ ತಂದಿದೆ. ಸೋಲಿಗೆ ಕಾರಣ ಹುಡುಕುವುದರ ಜತೆ ದೆಹಲಿ ಕಾಂಗ್ರೆಸ್​ ಘಟಕದಲ್ಲಿ ಭಾರಿ ಬದಲಾವಣೆ ತರಲು ಮುಂದಾಗಿದೆ.

    ಕಾಂಗ್ರೆಸ್​ನ 67 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ. ಶೀಲಾ ದೀಕ್ಷಿತ್​ ನಂತರ ದೆಹಲಿಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ನಾಯಕರು ವಿಫಲವಾಗಿರುವುದು ಕೂಡ ಚರ್ಚೆಗೆ ಒಳಪಟ್ಟಿದೆ.

    ದೆಹಲಿ ಉಸ್ತುವಾರಿ ವಹಿಸಿಕೊಂಡಿದ್ದ ಚಾಕೋ ಅವರಿಂದ ಪಕ್ಷಕ್ಕೆ ಸೋಲಾಯಿತು ಎಂಬುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್​ ವಕ್ತಾರ ರಣದೀಪ್​ ಸಿಂಗ್​ ಸುರ್ಜೆವಾಲಾ ಹೇಳಿದ್ದಾರೆ.

    ದೆಹಲಿಯಲ್ಲಿ ಪಕ್ಷದ ಸೋಲಿಗೆ ಏನು ಕಾರಣ ಎಂದು ಹುಡುಕಿ ತಳಮಟ್ಟದಿಂದ ಪಕ್ಷ ಸಂಘಟಿಸುತ್ತೇವೆ, ಸೋಲಿಗೆ ಯಾರನ್ನು ಹೊಣೆಗಾರರನ್ನಾಗಿ ಮಾಡುವುದಿಲ್ಲ. ಸಿದ್ಧಾಂತ ಬಿಟ್ಟುಕೊಡದೆ ಪಕ್ಷವನ್ನು ಕಟ್ಟುತ್ತೇವೆ. ಕೆಲವೊಂದು ತ್ಯಾಗ ಮಾಡಿ ಪಕ್ಷ ಬಲಪಡಿಸುತ್ತೇವೆ ಎಂದು ರಣದೀಪ್​ ಹೇಳಿದರು. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts