More

    VIDEO| ಔತಣಕೂಟದಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿ ಭವನಕ್ಕೆ ಟ್ರಂಪ್​ ದಂಪತಿ ಆಗಮನ: ರಾಮನಾಥ್​ ಕೋವಿಂದ್​ ದಂಪತಿಯಿಂದ ಭವ್ಯ ಸ್ವಾಗತ

    ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಹಾಗೂ ಪ್ರಥಮ ಮಹಿಳೆ ಮೆಲನಿಯಾ ಟ್ರಂಪ್​ ಅವರ ಎರಡು ದಿನಗಳ ಭಾರತ ಪ್ರವಾಸ ಅಂತಿಮ ಘಟ್ಟಕ್ಕೆ ಬಂದಿದೆ. ಪ್ರಸ್ತುತ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಏರ್ಪಡಿಸಿರುವ ಔತಣಕೂಟದಲ್ಲಿ ಪಾಲ್ಗೊಳ್ಳಲು ಟ್ರಂಪ್ ದಂಪತಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದಾರೆ.

    ಟ್ರಂಪ್​ ದಂಪತಿಯನ್ನು ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಮತ್ತು ಪತ್ನಿ ಸವಿತಾ ಕೋವಿಂದ್ ಆತ್ಮೀಯವಾಗಿ ಬರಮಾಡಿಕೊಂಡರು. ಅಮೆರಿಕ ಅಧ್ಯಕ್ಷರ ಗೌರವಾರ್ಥ ರಾಷ್ಟ್ರಪತಿಗಳು ಔತಣಕೂಟವನ್ನು ಆಯೋಜಿಸಿದ್ದಾರೆ.​ ಟ್ರಂಪ್​ ಪುತ್ರಿ ಇವಾಂಕ ಟ್ರಂಪ್​ ಮತ್ತು ಅಳಿಯ ಜರೇದ್​ ಕುಶ್ನರ್​ ಕೂಡ ಉಪಸ್ಥಿತರಿದ್ದಾರೆ.

    ಮಂಗಳವಾರ ಬೆಳಗ್ಗೆ ಅಹಮದಾಬಾದ್​ಗೆ ಬಂದಿಳಿದ ಟ್ರಂಪ್​ ದಂಪತಿ, ಮೊದಲ ದಿನದ ಸಬರಮತಿ ಆಶ್ರಮ ಭೇಟಿ, ನಮಸ್ತೆ ಟ್ರಂಪ್​ ಕಾರ್ಯಕ್ರಮದಲ್ಲಿ ಭಾಗಿ ಹಾಗೂ ತಾಜ್​ ಮಹಲ್​ ವೀಕ್ಷಣೆ ಮಾಡಿ ದೆಹಲಿಗೆ ಆಗಮಿಸಿದ್ದರು.

    ಎರಡನೇ ದಿನವಾದ ಇಂದು ಬೆಳಗ್ಗೆ ಟ್ರಂಪ್​ ಗೌರವಾರ್ಥ ರಾಷ್ಟ್ರಪತಿ ಭವನದಲ್ಲಿ ಕಾರ್ಯಕ್ರಮ ನಡೆಯಿತು. ಬಳಿಕ ರಾಜ್​ಘಾಟ್​ಗೆ ಟ್ರಂಪ್ ದಂಪತಿ ಭೇಟಿ ನೀಡಿ ಮಹಾತ್ಮ ಗಾಂಧಿ ಸಮಾಧಿಗೆ ಗೌರವ ಸಲ್ಲಿಸಿದರು. ಬಳಿಕ ದೆಹಲಿಯ ಹೈದರಾಬಾದ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಟ್ರಂಪ್ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯಿತು.

    ಇದರ ನಡುವೆ ದೆಹಲಿಯ ಸರ್ಕಾರಿ ಶಾಲೆಯೊಂದಕ್ಕೆ ಮೆಲನಿಯಾ ಟ್ರಂಪ್​ ಭೇಟಿ ನೀಡಿದರು. ಮಧ್ಯಾಹ್ನ ಅಮೆರಿಕ ರಾಯಭಾರ ಕಚೇರಿಯಲ್ಲಿ ಸಿಇಒಗಳ ದುಂಡುಮೇಜಿನ ಸಭೆ ನಡೆಯಿತು. ಇದೀಗ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರನ್ನು ಭೇಟಿ ಮಾಡಿರುವ ಟ್ರಂಪ್​ ಔತಣಕೂಟದಲ್ಲಿ ಪಾಲ್ಗೊಂಡಿದ್ದಾರೆ. ಇದು ಮುಗಿದ ಬಳಿಕ ರಾತ್ರಿ 10ಕ್ಕೆ ಟ್ರಂಪ್ ದಂಪತಿ​ ಅಮೆರಿಕಗೆ ನಿರ್ಗಮಿಸಲಿದ್ದಾರೆ. (ಏಜೆನ್ಸೀಸ್​)​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts