Delhi Victory: ವಿಕಸಿತ ಭಾರತದ ಸಂಕಲ್ಪ ತೊಟ್ಟು ದೇಶವನ್ನು ಜಾಗತಿಕ ಮಟ್ಟದಲ್ಲಿ ಬಲಿಷ್ಟಗೊಳಿಸಲು ಯೋಜನೆ ರೂಪಿಸುತ್ತಿರುವ ಪ್ರಧಾನಿಯವರಿಗೆ ದೇಶದ ರಾಜಧಾನಿಯ ಗೆಲುವು ಭೀಮ ಬಲವನ್ನು ತಂದು ಕೊಟ್ಟಿದೆ ಎಂದು ಬಿಜೆಪಿನ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಇದನ್ನೂ ಓದಿ:IND vs ENG 2nd ODI | ಇಂಗ್ಲೆಂಡ್ ವಿರುದ್ಧ ಅಬ್ಬರಿಸಲು ‘ಕಿಂಗ್’ ಕೊಹ್ಲಿ ಸಜ್ಜು! ಅಭಿಮಾನಿಗಳಲ್ಲಿ ಹೆಚ್ಚಿದ ಕಾತರ
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊ0ಡಿರುವ ವಿಜಯೇಂದ್ರ, ”ಭಾರತವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಮೋದಿ ಅವರ ನಾಯಕತ್ವಕ್ಕೆ ಶಕ್ತಿ ತುಂಬುವ ಸಂದೇಶವನ್ನು ದೆಹಲಿಯ ಜನತೆ ಬಿಜೆಪಿ ಗೆಲ್ಲಿಸುವ ಮೂಲಕ ಪಸರಿಸಿದ್ದಾರೆನ ಎಂದಿದ್ದಾರೆ”.
ಇದನ್ನೂ ಓದಿ:ದೆಹಲಿ ಬಿಜೆಪಿ ಕಚೇರಿಯಲ್ಲಿ ವಿಜಯೋತ್ಸವ: ಪ್ರಧಾನಿ ಮೋದಿ ಸೇರಿ ಹೈಕಮಾಂಡ್ ನಾಯಕರು ಭಾಗಿ | Victory Celebration
ಬಿಜೆಪಿಯ ವಿರುದ್ಧ ಸುಳ್ಳು ಅಪಪ್ರಚಾರಗಳನ್ನು ನಡೆಸಿ ತಾತ್ಕಾಲಿಕ ಗೆಲುವು ಸಾಧಿಸಬಹುದೇ ಹೊರತು ಪಕ್ಷ ಸಿದ್ಧಾಂತದೊಂದಿಗೆ ಸೆಣಸಿ ಬಿಜೆಪಿ ಮಣಿಸಲು ಸಾಧ್ಯವಿಲ್ಲ ಎನ್ನುವುದನ್ನು ದೆಹಲಿಯ ಫಲಿತಾಂಶ ತೋರಿಸಿಕೊಟ್ಟಿದೆ. ಭವಿಷ್ಯತ್ತಿನಲ್ಲಿ ಇದು ಕರ್ನಾಟಕದಲ್ಲೂ ಪ್ರತಿಫಲಿಸಲಿದೆ ಎಂದು ಹೇಳಿದ್ದಾರೆ.
ಭಾರತವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಹೆಮ್ಮೆಯ ಪ್ರಧಾನಿ ಶ್ರೀ @narendramodi ಜೀ ಅವರ ನಾಯಕತ್ವಕ್ಕೆ ಶಕ್ತಿ ತುಂಬುವ ಸಂದೇಶವನ್ನು ದೆಹಲಿಯ ಜನತೆ ಬಿಜೆಪಿ ಗೆಲ್ಲಿಸುವ ಮೂಲಕ ಪಸರಿಸಿದ್ದಾರೆ. ಬಿಜೆಪಿಗೆ ದಾಖಲೆಯ ದಿಗ್ವಿಜಯ ದೊರಕಿಸಿಕೊಟ್ಟ ದೆಹಲಿಯ ಮತದಾರರಿಗೆ ಕೃತಜ್ಞತೆ ಸಲ್ಲಿಸಿ, ಮಾನ್ಯ ಮೋದಿಜೀ ಅವರನ್ನು ಕರ್ನಾಟಕದ ಜನತೆಯ ಪರವಾಗಿ… pic.twitter.com/YDwhptBNmF
— Vijayendra Yediyurappa (@BYVijayendra) February 8, 2025
ಚಾರಿತ್ರಿಕ ಜಯ
ದೆಹಲಿಯ ಆಡಳಿತದ ಚುಕ್ಕಾಣಿಯನ್ನು ಬಿಜೆಪಿ ಮಡಿಲಿಗೆ ಸಮರ್ಪಿಸಿರುವ ದೆಹಲಿಯ ಜನತೆಯ ಆಶೋತ್ತರಗಳನ್ನು ಈಡೇರಿಸಲು ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ನೂತನ ಸರ್ಕಾರ ಕಟಿಬದ್ಧವಾಗಿ ಕೆಲಸ ಮಾಡಲಿದೆ ಎನ್ನುವುದು ದೆಹಲಿ ಚುನಾವಣೆಗಾಗಿ ಶ್ರಮಿಸಿದ ಪ್ರತಿಯೊಬ್ಬ ಪಕ್ಷ ಪ್ರಮುಖರು ಹಾಗೂ ಕಾರ್ಯಕರ್ತರ ಅಭಯವಾಗಿದೆ. ಈ ಚುನಾವಣೆ ಬಿಜೆಪಿಯ ಕಾರ್ಯಕರ್ತರು ಹಾಗೂ ದೆಹಲಿಯ ಜನತೆಯ ಚಾರಿತ್ರಿಕ ಜಯವಾಗಿದೆ ಎಂದಿದ್ದಾರೆ.
ದೆಹಲಿ ಬಿಜೆಪಿ ಕಚೇರಿಯಲ್ಲಿ ವಿಜಯೋತ್ಸವ: ಪ್ರಧಾನಿ ಮೋದಿ ಸೇರಿ ಹೈಕಮಾಂಡ್ ನಾಯಕರು ಭಾಗಿ | Victory Celebration