More

    ದೆಹಲಿ ಹಿಂಸಾಚಾರ ತಡೆಯಲು ವಿಫಲರಾದ ಕೇಂದ್ರ ಗೃಹ ಸಚಿವರು ರಾಜೀನಾಮೆ ನೀಡಬೇಕು: ಕಾಂಗ್ರೆಸ್​ ಆಗ್ರಹ

    ನವದೆಹಲಿ: ರಾಜಧಾನಿಯಲ್ಲಿ ನಡೆಯುತ್ತಿರುವ ಹಿಂಸಾಚಾರ ತಡೆಯಲು ವಿಫಲರಾದ ಕೇಂದ್ರ ಗೃಹ ಸಚಿವ ಅಮಿತ್​ ಷಾ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್​ ಒತ್ತಾಯಿಸಿದೆ.

    ದೆಹಲಿಯಲ್ಲಿ ಸಭೆ ನಡೆಸಿದ ಕಾಂಗ್ರೆಸ್​ ಕಾರ್ಯಕಾರಿ ಸಮಿತಿ, ರಾಷ್ಟ್ರದ ರಾಜಧಾನಿಯಲ್ಲಿ ನಡೆದ ಗಲಭೆ ತಡೆಯಲು ಕೇಂದ್ರ ಹಾಗೂ ಕೇಜ್ರಿವಾಲ್​ ನೇತೃತ್ವದ ರಾಜ್ಯ ಸರ್ಕಾರ ವಿಫಲವಾಗಿವೆ. ಇದು ಅವರ ನಿರ್ಲಕ್ಷಕ್ಕೆ ಕಾರಣವಾಗಿದೆ ಎಂದು ಆರೋಪಿಸಿತು.

    ಎರಡು ಸರ್ಕಾರಗಳ ಸಾಮೂಹಿಕ ವೈಫಲ್ಯದಿಂದ ರಾಷ್ಟ್ರದ ರಾಜಧಾನಿಯಲ್ಲಿ ಗಲಭೆ ಸಂಭವಿಸಿದೆ. ಪರಿಸ್ಥಿತಿ ಇದೆ ರೀತಿ ಮುಂದುವರೆದರೆ ಪರಿಣಾಮ ಭೀಕರವಾಗಲಿದೆ. ಗಲಭೆಯ ಸಂಪೂರ್ಣ ಹೊಣೆಯನ್ನು ಕೇಂದ್ರ ಸರ್ಕಾರ ಅದರಲ್ಲೂ ಗೃಹ ಸಚಿವ ಅಮಿತ್​ ಷಾ ಹೊರಬೇಕು. ಹೀಗಾಗಿ ಅವರು ತಕ್ಷಣವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಸಮಿತಿ ಆಗ್ರಹಿಸಿತು.

    ಕಾಂಗ್ರೆಸ್​ ಕಾರ್ಯಕರ್ತರು ಕೂಡಲೇ ಗಲಭೆ ಪೀಡಿತ ಪ್ರದೇಶಗಳಿಗೆ ತೆರಳಿ ನಾಗರಿಕರ ರಕ್ಷಣೆಗೆ ಕೈ ಜೋಡಿಸಬೇಕು ಎಂದು ಸಮಿತಿ ಮನವಿ ಮಾಡಿದೆ.

    ಸೋನಿಯಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಹಿರಿಯ ನಾಯಕರಾದ ಎ.ಕೆ.ಆಂಟನಿ, ಗುಲಾಮ್ ನಬಿ ಆಜಾದ್, ಪ್ರಿಯಾಂಕಾ ಗಾಂಧಿ ವಾದ್ರಾ, ಜ್ಯೋತಿರಾಧಿತ್ಯ ಸಿಂಧಿಯಾ ಹಾಗೂ ಇತರರು ಇದ್ದರು.

    ಜಾಫ್ರಬಾದ್​ ಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಭಾನುವಾರ ಆರಂಭವಾದ ಪ್ರತಿಭಟನೆ ಸೋಮವಾರ ಮತ್ತು ಮಂಗಳವಾರ ಹಿಂಸಾರೂಪಕ್ಕೆ ತಾಳಿ 20 ಮಂದಿ ಮೃತಪಟ್ಟಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts