More

    ಕರೊನಾ ರಾಜಧಾನಿ ಆಗುತ್ತೆ ದೆಹಲಿ; ಸರ್ಕಾರಕ್ಕೆ ಹೈಕೋರ್ಟ್​ ತರಾಟೆ

    ನವದೆಹಲಿ: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆತಂಕ ಮೂಡಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಶೀಘ್ರದಲ್ಲೇ ದೆಹಲಿ ಕರೊನಾ ರಾಜಧಾನಿ ಆಗುತ್ತದೆ ಎಂದು ಆಪ್​ ಸರ್ಕಾರದ ವಿರುದ್ಧ ಹೈಕೋರ್ಟ್ ಕಿಡಿಕಾರಿದೆ.

    ಸಾಂಕ್ರಾಮಿಕ ಪಿಡುಗನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಗೋಜಲು ಮಾಡಿಕೊಂಡಿದೆ. ನಗರ ಸದ್ಯದಲ್ಲೇ ಕರೊನಾ ರಾಜಧಾನಿ ಆಗಿ ಪರಿವರ್ತನೆ ಆಗಲಿದೆ ಎಂದು ಹೈಕೋರ್ಟ್ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಸುಬ್ರಮಣಿಯಂ ಪ್ರಸಾದ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ದೆಹಲಿ ಮುನಿಸಿಪಾಲಿಟಿಯ ವಿವಿಧ ವರ್ಗದ ನೌಕರರಿಗೆ ವೇತನ ಹಾಗೂ ಪಿಂಚಣಿ ನೀಡದ ಹಿನ್ನೆಲೆಯಲ್ಲಿ ಸಲ್ಲಿಕೆಯಾಗಿದ್ದ ದೂರಿನ ವಿಚಾರಣೆ ವೇಳೆ ಪೀಠ ಈ ಅಸಮಾಧಾನ ವ್ಯಕ್ತಪಡಿಸಿದೆ. ಕರೊನಾ ಪರೀಕ್ಷೆಯಲ್ಲಿ ಸಾಧನೆ ಮಾಡಿದೆ ಎಂದು ಸರ್ಕಾರ ಹಲವು ಬಾರಿ ಹೇಳಿದ್ದರೂ ಕರೊನಾ ಸೋಂಕು ತೀವ್ರವಾಗಿ ಹೆಚ್ಚಳವಾಗಿದೆ ಎಂದು ಕೋರ್ಟ್​ ತರಾಟೆಗೆ ತೆಗೆದುಕೊಂಡಿದೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts