More

    ಕೇಂದ್ರ ಪುರಸ್ಕೃತ ಯೋಜನೆ ಜನರಿಗೆ ತಲುಪಿಸಿ

    ರಾಯಚೂರು: ವಿವಿಧ ಇಲಾಖೆಗಳಲ್ಲಿನ ಕೇಂದ್ರ ಪುರಸ್ಕೃತ ಯೋಜನೆಗಳನ್ನು ಜನರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಅಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಸೂಚಿಸಿದರು.
    ಸ್ಥಳೀಯ ಜಿ.ಪಂ. ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಬರ ಪರಿಸ್ಥಿತಿಯಿಂದ ರೈತರು ಸಂಕಷ್ಟದಲ್ಲಿದ್ದು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಲಸವಾಗಬೇಕು ಎಂದರು.
    ಮುಂಗಾರು ಮಳೆ ವಿಲವಾಗಿರುವುದರ ಜತೆಗೆ ಅಕಾಲಿಕ ಮಳೆಯಿಂದ ಬೆಳೆ ಹಾನಿಗೊಳಗಾಗಿದೆ. ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು. ತೋಟಗಾರಿಕೆ ಬೆಳೆ ಬೆಳಯಲು ಹೆಚ್ಚಿನ ಖರ್ಚಾಗಿರುತ್ತಿದ್ದು, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯನ್ನು ರೈತರಿಗೆ ಮುಟ್ಟಿಸಬೇಕು.
    ಕೃಷ್ಣಾ ನದಿಗೆ ಹೊಸದಾಗಿ ನಿರ್ಮಾಣ ಮಾಡುತ್ತಿರುವ ಸೇತುವೆ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದೆ. ಭಾರಿ ವಾಹನಗಳ ಸಂಚಾರದಿಂದ ಹಳೇ ಸೇತುವೆ ಹಾಳಾಗುತ್ತಿದ್ದು, ಕೂಡಲೇ ಸಂಬಂಸಿದ ಅಕಾರಿಗಳು ಸೇತುವೆ ದುರಸ್ತಿಗೊಳಿಸುವುದರ ಜತೆಗೆ ಹೊಸ ಸೇತುವೆ ನಿರ್ಮಾಣವನ್ನು ಚುರುಕುಗೊಳಿಸಬೇಕು.
    ಕೇಂದ್ರ ಸರ್ಕಾರದಿಂದ ಜಲಜೀವನ್ ಮಿಷನ್ ಹಾಗೂಜಲಧಾರೆ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಜಿಲ್ಲೆಯ 1,222 ಹಳ್ಳಿಗಳ್ಲಲಿ ಯೋಜನೆಯನ್ನು ಆರಂಭಿಸಲಾಗಿದೆ. ಅದರಲ್ಲಿ ಕೇವಲ 498 ಜಲಜೀವನ್ ಮಿಷನ್ ಕಾಮಗಾರಿ ಪೂರ್ಣಗೊಳಿಸಲಾಗಿದ್ದು, 165 ಕಾಮಗಾರಿ ಪ್ರಾರಂಭಿಸಲಾಗಿಲ್ಲ. ಕೂಡಲೇ ಕಾಮಗಾರಿ ಆರಂಭಿಸಬೇಕು ಎಂದು ರಾಜಾ ಅಮರೇಶ್ವರ ನಾಯಕ ಸೂಚಿಸಿದರು.
    ಕೊಪ್ಪಳ ಸಂಸದ ಸಂಗಣ್ಣ ಕರಡಿ ಮಾತನಾಡಿ, ರೈತರಿಗಾಗಿ ಇರುವ ಯೋಜನೆಗಳನ್ನು ರೈತರಿಗೆ ಸಮರ್ಪಕ ರೀತಿಯಲ್ಲಿ ಮುಟ್ಟಿಸಬೇಕು. ಇಲ್ಲವಾದಲ್ಲಿ ಇಲಾಖೆ ಅಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು. ಜೆಜೆಎಂ ಹಾಗೂ ಜಲಧಾರೆ ಯೋಜನೆಗಳನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ತಿಳಿಸಿದರು.
    ಸಭೆಯಲ್ಲಿ ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಪುರ, ದಿಶಾ ಸಮಿತಿ ಸದಸ್ಯರಾದ ಶಿವಾರೆಡ್ಡಿ, ತಿಮ್ಮಾರೆಡ್ಡಿ ಭೋಗಾವತಿ, ಸತೀಶ, ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಎಸ್ಪಿ ಬಿ.ನಿಖಿಲ್, ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ, ಮುಖ್ಯ ಯೋಜನಾಕಾರಿ ಡಾ.ಟಿ.ರೋಣಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts