22.5 C
Bengaluru
Sunday, January 19, 2020

ಸರ್ಕಾರದ ಯೋಜನೆ ತಲುಪಿಸಿ

Latest News

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಡಿಕೇರಿ: ನಗರದ ಹಿಲ್ ರೋಡ್ ಅಂಗನವಾಡಿಯಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ...

ಶೇ.95ರಷ್ಟು ಮಕ್ಕಳಿಗೆ ಲಸಿಕೆ

ಮೈಸೂರು: ಮಕ್ಕಳನ್ನು ಮಾರಕ ಪೊಲೀಯೋ ಕಾಯಿಲೆಯಿಂದ ದೂರವಿಡಲು ಜಿಲ್ಲೆಯಲ್ಲಿ ಭಾನುವಾರ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಜಿಲ್ಲೆಯನ್ನು ಪೊಲೀಯೋ ಮುಕ್ತಗೊಳಿಸಲು ಪಣತೊಟ್ಟಿರುವ ಆರೋಗ್ಯ...

ಎಂ.ಎಸ್​. ಧೋನಿ ಹಿಂದಿಕ್ಕಿದ ವಿರಾಟ್​ ಕೊಹ್ಲಿ: ಕೊಹ್ಲಿಗೆ ಸರಿಸಮಾನಾಗಿ ನಿಂತ ರೋಹಿತ್​ ಶರ್ಮ!

ಬೆಂಗಳೂರು: ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಏಕದಿನ ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಟೀಮ್​ ಇಂಡಿಯಾ ಗೆಲುವು...

ಕುಸಿದು ಬಿದ್ದ ಕಾಲುವೆ ಸಂಪರ್ಕ ಸೇತುವೆ ಪರಿಶೀಲನೆ

ಮುದ್ದೇಬಿಹಾಳ: ತಾಲೂಕಿನ ಸರೂರ, ಕವಡಿಮಟ್ಟಿ, ನೆರಬೆಂಚಿ ಗ್ರಾಮದ ಭಾಗದಲ್ಲಿ ಹಾಯ್ದು ಹೋಗಿರುವ ಕಾಲುವೆ ಕಾಮಗಾರಿ ಕಳಪೆಮಟ್ಟದಿಂದ ಕೂಡಿದ್ದು, ಕೂಡಲೇ ದುರಸ್ತಿಗೆ ಅಧಿಕಾರಿಗಳು ಕ್ರಮ...

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಮಡಿಕೇರಿ: ಇಲಾಖೆಗಳಲ್ಲಿ ಲಭ್ಯವಿರುವ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್ ಸೂಚಿಸಿದರು.
ಮಡಿಕೇರಿ ತಾಲೂಕು ಪಂಚಾಯಿತಿಯ ಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸರ್ಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು ಶ್ರಮ ವಹಿಸಬೇಕು ಎಂದು ತಿಳಿಸಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ದಮಯಂತಿ ಮಾತನಾಡಿ, ಇಲಾಖೆಯು ಪೂರಕ ಪೌಷ್ಟಿಕ ಆಹಾರ ಯೋಜನೆಯಲ್ಲಿ ಶೇ. 47ರಷ್ಟು ಪ್ರಗತಿ ಸಾಧಿಸಿದೆ. ಮೆನು ಚಾರ್ಟ್‌ನಲ್ಲಿರುವಂತೆ ಮಕ್ಕಳಿಗೆ ಆಹಾರ ಕೊಡಲು ಅಂಗನವಾಡಿ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಮಾತೃಪೂರ್ಣ ಯೋಜನೆ ಅನುಷ್ಠಾನಗೊಂಡಿರುವ ಅಂಗನವಾಡಿಗಳಲ್ಲಿ ಗರ್ಭಿಣಿ, ಬಾಣಂತಿಯರಿಗೆ ಉಪ ಆಹಾರವನ್ನು ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕಾರುಗುಂದ ಶಾಲೆಗೆ ಪೇರೂರಿನಿಂದ ಬಂದಿದ್ದ ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ಶಿಕ್ಷಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿಲ್ಲ ಎಂದು ಎಸ್‌ಡಿಎಂಸಿ ಸದಸ್ಯರು ಆರೋಪಿಸಿದ್ದರು. ಈ ಬಗ್ಗೆ ಇಲಾಖೆ ಯಾವ ಕ್ರಮ ಕೈಗೊಂಡಿದೆ ಎಂದು ಅಧ್ಯಕ್ಷೆ ಶೋಭಾ ಮೋಹನ್ ಶಿಕ್ಷಣಾಧಿಕಾರಿಯನ್ನು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿ ಶಿಕ್ಷಕರಿಗೆ ನೋಟಿಸ್ ನೀಡಲಾಗಿದ್ದು, ಇದೇ ವರ್ತನೆ ಮರುಕಳಿಸಿದಲ್ಲಿ ಶಿಸ್ತು ಕ್ರಮ ಜರುಗಿಸುವುದಾಗಿ ತಿಳಿಸಿದರು.

ಪಶುಪಾಲನೆ ಇಲಾಖೆಯಡಿ ಕೆಲಸ ನಿರ್ವಹಿಸಲು ಸಿಬ್ಬಂದಿ ಕೊರತೆ ಕಾಡುತ್ತಿದೆ. ಹಂದಿ, ಹಸು, ಕೋಳಿ ಸಾಕಿ ಎನ್ನುವ ಅಧಿಕಾರಿಗಳು, ಸಾಕು ಪ್ರಾಣಿಗಳಿಗೆ ತೊಂದರೆ ಉಂಟಾದಲ್ಲಿ ಯಾವುದೇ ಮುಂಜಾಗ್ರತೆಯನ್ನು ಕೈಗೊಂಡಿಲ್ಲ. ಈ ಬಗ್ಗೆ ರೈತರು ಅಸಮಾಧಾನ ವ್ಯಕ್ತಪಡಿಸುತ್ತಾರೆ. ಸಂಬಂಧಪಟ್ಟ ಇಲಾಖೆಯವರು ಈ ಬಗ್ಗೆ ಸೂಕ್ತ ಗಮನ ಹರಿಸಬೇಕು ಎಂದು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೊಡಪಾಲು ಗಣಪತಿ ಒತ್ತಾಯಿಸಿದರು.

ಪ್ರಕೃತಿ ವಿಕೋಪದ ನಂತರ ರಸ್ತೆ ಬದಿಯಲ್ಲಿ ಸಾಕು ಪ್ರಾಣಿಗಳು ಓಡಾಡುತ್ತಿವೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ವಹಿಸಬೇಕು ಎಂದು ತಾ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ.ಲಕ್ಷ್ಮೀ ಅಧಿಕಾರಿಗೆ ಸೂಚಿಸಿದರು.

ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಅಧಿಕಾರಿ ನಂದಿಕೋಲ್ ಮಾತನಾಡಿ, ಪ್ರಕೃತಿ ವಿಕೋಪದಲ್ಲಿ ಹಾಳಾದ ರಸ್ತೆ ಸರಿಪಡಿಸಲು ಜಿಲ್ಲಾಧಿಕಾರಿ 33 ಕೋಟಿ ರೂ. ಬಿಡುಗಡೆ ಮಾಡಿದ್ದು, ಮಡಿಕೇರಿ ತಾಲೂಕಿಗೆ 15 ಕೋಟಿ ಲಭ್ಯವಾಗಿದ್ದು, ಕೆಲಸ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

26 ಗ್ರಾಮ ಪಂಚಾಯಿತಿಗೆ ಸ್ಮಶಾನ ಜಾಗ ಹಾಗೂ ಕಸ ವಿಲೇವಾರಿಗೆ ಜಾಗ ನೀಡುವಂತೆ ಸಂಬಂಧಪಟ್ಟ ಇಲಾಖೆಗೆ ಹಲವು ಬಾರಿ ಸೂಚನೆ ನೀಡಲಾಗಿದೆ. ಆದರೂ ಯಾವುದೇ ಪ್ರಗತಿ ಇಲ್ಲ ಎಂದು ಪಿ.ಲಕ್ಷ್ಮೀ ಕಂದಾಯ ಇಲಾಖೆಯ ಅಧಿಕಾರಿ ಗಮನಕ್ಕೆ ತಂದು, ಈ ಬಗ್ಗೆ ಶೀಘ್ರ ಕ್ರಮಕ್ಕೆ ಸೂಚಿಸಿದರು.

ಸಭೆಯಲ್ಲಿ ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಸಹಕಾರ ಇಲಾಖೆ, ಅಕ್ಷರ ದಾಸೋಹ, ಆಯುಷ್, ಸಾಮಾಜಿಕ ಅರಣ್ಯ, ಆಹಾರ, ಆರೋಗ್ಯ, ನೀರು ಮತ್ತು ನೈರ್ಮಲ್ಯ, ಸೆಸ್ಕ್, ಸರ್ವ ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಯಿತು. ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

 

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...