More

    ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಿಸಿ

    ಸಾಗರ: ಕೇಂದ್ರ ಸರ್ಕಾರದ ಯೋಜನೆಗಳನ್ನು ನಿಜವಾದ ಫಲಾನುಭವಿಗಳಿಗೆ ಪ್ರಾಮಾಣಿಕವಾಗಿ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರದ್ದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

    ಸಾಗರ: ಕೇಂದ್ರ ಸರ್ಕಾರದ ಯೋಜನೆಗಳನ್ನು ನಿಜವಾದ ಫಲಾನುಭವಿಗಳಿಗೆ ಪ್ರಾಮಾಣಿಕವಾಗಿ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರದ್ದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
    ತಾಲೂಕಿನ ತಾಳಗುಪ್ಪದಲ್ಲಿ ಬುಧವಾರ ಆಯೋಜಿಸಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಉದ್ದೇಶಿಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಸರ್ವಾಂಗೀಣ ಅಭಿವೃದ್ಧಿ ಆಶಯ ಪರಿಪೂರ್ಣವಾಗಿ ಈಡೇರಬೇಕಾದರೆ ನಾವು ಯೋಜನೆಗಳನ್ನು ಜನರಿಗೆ ಪ್ರತಿಶತ ತಲುಪಿಸಬೇಕು ಎಂದರು.
    ಈಗಾಗಲೇ ಸಾಗರ ಕ್ಷೇತ್ರ ವ್ಯಾಪ್ತಿಯಲ್ಲಿ ಕೇಂದ್ರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ನಡೆಯುತ್ತಿದೆ. ಕಳೆದ ನಾಲ್ಕು ವರ್ಷದಲ್ಲಿ ಸುಮಾರು ಎರಡೂವರೆ ಲಕ್ಷ ಮನೆಗಳಿಗೆ ಕೇಂದ್ರದ ಜಲಜೀವನ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಉಜ್ವಲ ಯೋಜನೆಯಡಿ ಸಬ್ಸಿಡಿ ದರದಲ್ಲಿ ಅಡುಗೆ ಅನಿಲ, ಸುಕನ್ಯಾ ಸಮೃದ್ಧಿ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದೆ. ಕೇಂದ್ರ ಸರ್ಕಾರ ಹೊಸದಾಗಿ ವಿಶ್ವಕರ್ಮ ಯೋಜನೆ ಜಾರಿಗೆ ತಂದಿದ್ದು, ಕಡಿಮೆ ಬಡ್ಡಿ ದರದಲ್ಲಿ ಸಾಲ ಒದಗಿಸುತ್ತಿದೆ. ಅರ್ಹರು ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
    ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸಮಗ್ರ ಅಭಿವೃದ್ಧಿಗೆ ಸಂಕಲ್ಪ ತೊಟ್ಟು ಕೆಲಸ ಮಾಡುತ್ತಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ಅತ್ಯಂತ ಮಾದರಿಯಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬರುವುದು ನಿಶ್ಚಿತ. ವಿಕಸಿತ ಭಾರತ ಸಂಕಲ್ಪ ಯಾತ್ರೆ ಮೂಲಕ ಕ್ಷೇತ್ರವ್ಯಾಪ್ತಿಯಲ್ಲಿ ಆಗಿರುವ ಅಭಿವೃದ್ಧಿ ಕೆಲಸ ಮತ್ತು ಯೋಜನೆಗಳು ಫಲಾನುಭವಿಗಳಿಗೆ ತಲುಪಿದೆಯೋ, ಇಲ್ಲವೋ ಎಂದು ಪರಿಶೀಲಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts