More

    ವಾರದ ಮೂರು ದಿನ ರಾಗಿ ಮಾಲ್ಟ್ ವಿತರಣೆ

    ಕೆ.ಎಂ.ದೊಡ್ಡಿ: ಪೌಷ್ಟಿಕಾಂಶ ಆಹಾರ ಸೇವನೆಯಿಂದ ಮಕ್ಕಳು ಆರೋಗ್ಯವಂತರಾಗಿರುತ್ತಾರೆ ಎಂಬ ದೃಷ್ಟಿಯಿಂದ ಸರ್ಕಾರ ವಾರದ ಮೂರು ದಿನ ರಾಗಿ ಮಾಲ್ಟ್ ವಿತರಣೆಗೆ ಕ್ರಮ ವಹಿಸಿದೆ ಎಂದು ಶಾಸಕ ಕದಲೂರು ಉದಯ್ ತಿಳಿಸಿದರು.

    ಸಮೀಪದ ಕೊಕ್ಕರೆ ಬೆಳ್ಳೂರು ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ರಾಗಿ ಮಾಲ್ಟ್ ವಿತರಿಸುವ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳ ಅಪೌಷ್ಟಿಕತೆ ತಡೆಗಟ್ಟಲು ಬಿಸಿಯೂಟ ಯೋಜನೆಯಡಿ ಶಾಲಾ ಮಕ್ಕಳಿಗೆ ಹಾಲಿನೊಂದಿಗೆ ರಾಗಿ ಮಾಲ್ಟ್ ನೀಡಲಾಗುತ್ತದೆ ಎಂದರು.

    ರಾಗಿಯಲ್ಲಿ ಹೆಚ್ಚು ಕಬ್ಬಿಣಾಂಶ, ಪ್ರೋಟೀನ್ ಇದೆ. ಇದರ ಸೇವನೆಯಿಂದ ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗಲಿದ್ದು, ಎಲ್ಲ ವಿದ್ಯಾರ್ಥಿಗಳು ತಪ್ಪದೆ ಸೇವಿಸಬೇಕು ಎಂದು ಸಲಹೆ ನೀಡಿದರು.

    ಮಧ್ಯಾಹ್ನ ಬಿಸಿಯೂಟ ಯೋಜನೆಯಡಿ ಸರ್ಕಾರ ಈಗಾಗಲೇ ಬಿಸಿಯೂಟ, ಮೊಟ್ಟೆ, ಹಾಲು, ಚಿಕ್ಕಿ ನೀಡುತ್ತಿದೆ. ಇವುಗಳ ಜತೆ ಸೋಮವಾರ, ಬುಧವಾರ, ಶುಕ್ರವಾರ ರಾಗಿ ಮಾಲ್ಟ್ ವಿತರಿಸಲಾಗುವುದು ಎಂದರು.

    ಸಿರಿಧಾನ್ಯಗಳ ಸೇವನೆಯಿಂದ ಮಕ್ಕಳ ಬೆಳವಣಿಗೆಗೆ ಸಹಕಾರಿ. ಇದರಿಂದ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಬಹುದಾಗಿದೆ ಎಂದು ಅಭಿಪ್ರಾಯಪಟ್ಟರು.

    ಬಿಇಒ ಸಿ.ಎಚ್.ಕಾಳೀರಯ್ಯ, ಗ್ರಾಪಂ ಅಧ್ಯಕ್ಷ ಕೆಂಪರಾಜು, ಮಾಜಿ ಅಧ್ಯಕ್ಷೆ ಸುಂದರಮ್ಮ, ಪಿಡಿಒ ಪ್ರಭಾಕರ್, ಸದಸ್ಯರಾದ ಕುಮಾರ್, ಗೀತಾ, ಎಸ್‌ಡಿಎಂಸಿ ಅಧ್ಯಕ್ಷ ಮಂಚೇಗೌಡ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts