More

    ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಕ್ರಮಕ್ಕೆ ಒತ್ತಾಯ

    ಚಿಕ್ಕಮಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಪೋಸ್ಟ್ ಹಾಕಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಸದಸ್ಯರು ಸೋಮವಾರ ಶಿರಸ್ತೇದಾರ್ ಹೇಮಂತ್ ಕುಮಾರ್‌ಗೆ ಮನವಿ ಸಲ್ಲಿಸಿದರು.
    ಸಂಘದ ಅಧ್ಯಕ್ಷ ಓಂಕಾರೇಗೌಡ ಮಾತನಾಡಿ, ಫೇಸ್ಬುಕ್‌ನಲ್ಲಿ ನಕಲಿ ಖಾತೆ ಸೃಷ್ಟಿಸಿ ಅಶ್ವಿನಿ ಪುನೀತ್‌ರಾಜ್ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಮತ್ತು ಅಸಭ್ಯ ಪೋಸ್ಟ್‌ಗಳನ್ನು ಹಾಕಿ ತೇಜೋವಧೆಗೆ ಮುಂದಾಗಲಾಗಿದೆ ಎಂದು ಆರೋಪಿಸಿದರು.
    ಪೋಸ್ಟ್ ಸಂಬಂಧ ಈಗಾಗಲೇ ಕೊಪ್ಪಳ, ಗದಗ, ಹೊಸಪೇಟೆ, ಬಳ್ಳಾರಿ, ಹುಬ್ಬಳ್ಳಿ, ಬೆಳಗಾವಿ, ಧಾರವಾಡ, ಗಂಗಾವತಿ, ಹಾಸನ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ದೂರುಗಳನ್ನು ದಾಖಲಿಸಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
    ಪೋಸ್ಟ್ ಹಾಕಿರುವ ನಕಲಿ ಫೇಸ್‌ಬುಕ್ ಖಾತೆ ಬೆಂಬಲಿಗರು ಚಿಕ್ಕಮಗಳೂರಿನಲ್ಲಿ ಕಂಡು ಬಂದಲ್ಲಿ ತ್ವರಿತವಾಗಿ ಪ್ರಕರಣ ದಾಖಲಿಸಬೇಕು. ಮುಂದಿನ ದಿನಗಳಲ್ಲಿ ಅಶ್ವಿನಿ ಪುನೀತ್‌ರಾಜ್ಕುಮಾರ್ ವಿರುದ್ಧ ಅವಹೇಳನ ಶಬ್ದಗಳಿಂದ ನಿಂದಿಸುವ ವ್ಯಕ್ತಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕು ಎಂದು ಅಗ್ರಹಿಸಿದರು.
    ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಜಿ.ಬಸವರಾಜ್, ಉಪಾಧ್ಯಕ್ಷ ವಿನಯ್, ಎಂ.ಸಿ.ಅಶೋಕ್, ನಗರಸಭೆ ಸದಸ್ಯೆ ರೂಪಾ ಕುಮಾರ್, ಕಾನೂನು ಸಲಹೆಗಾರ ಎಂ.ಸಿ.ಆನಂದ್, ಅಪ್ಪು ಯೂಥ್ ಬ್ರಿಗೇಡ್ ಅಧ್ಯಕ್ಷ ಪ್ರದೀಪ್, ಪ್ರಧಾನ ಕಾರ್ಯದರ್ಶಿ ಶಂಕರಪುರ ಶಿವು, ಮುಖಂಡ ಬೈಗೂರು ನಾಗೇಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts