More

  ಗ್ಯಾರಂಟಿ ಯೋಜನೆಗಳನ್ನು ಮನವರಿಕೆ ಮಾಡಿಕೊಡಿ

  ಕೆ.ಆರ್.ನಗರ : ಪಕ್ಷದ ಜನಪ್ರಿಯ ಯೋಜನೆಗಳು ಮತ್ತು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡುವ ಮೂಲಕ ಮತಕೇಳಿ ಎಂದು ಶಾಸಕ ಡಿ.ರವಿಶಂಕರ್ ಕಾರ್ಯಕರ್ತರಿಗೆ ತಿಳಿಸಿದರು.


  ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾ.27 ರಂದು ಪಟ್ಟಣದಲ್ಲಿ ಆಯೋಜಿಸಿರುವ ಕಾರ್ಯಕರ್ತರ ಬೃಹತ್ ಸಮಾವೇಶದ ಅಂಗವಾಗಿ ಪಟ್ಟಣದ ಕನಕನಗರದಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.


  ಲೋಕಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿಯಾಗಬೇಕು. ಬೇರೆ ಪಕ್ಷದವರು ಹೇಳುವ ಸುಳ್ಳು ವದಂತಿಗಳಿಗೆ ಯಾರು ಕಿವಿ ಕೊಡಬಾರದು. ಗ್ಯಾರಂಟಿ ಯೋಜನೆಗಳನ್ನು ಮನದಟ್ಟು ಮಾಡಿಕೊಡಬೇಕು. ಪಟ್ಟಣಕ್ಕೇ ಈಗಾಗಲೇ ಒಳಚರಂಡಿ, ಕುಡಿಯುವ ನೀರಿನ ಸರಬರಾಜು, ರಸ್ತೆ ಮತ್ತು ಚರಂಡಿಗಳ ಅಭಿವೃದ್ಧಿ, ಉದ್ಯಾನಗಳ ಅಭಿವೃದ್ಧಿ, ಕ್ರೀಡಾಂಗಣ ಸೇರಿದಂತೆ ಪಟ್ಟಣ ಅಭಿವೃದ್ಧಿಗೆ ವಿವಿಧ ಯೋಜನೆ ಅಡಿ 60 ಕೋಟಿಗೂ ಹೆಚ್ಚು ಅನುದಾನ ತರಲಾಗಿದೆ ಎಂದರು.


  ಪಟ್ಟಣದ ಮೈಸೂರು-ಹಾಸನ ರಾಷ್ಟ್ರೀಯ ಹೆದ್ದಾರಿಯ ವಿಸ್ತರಣೆ. ಮಧುವನಹಳ್ಳಿ ಬಡಾವಣೆಯ ರಸ್ತೆ ವಿಸ್ತರಣೆ ಮತ್ತು ಅಭಿವೃದ್ಧಿ, ವಿವಿಧ ಸಮುದಾಯದ ಭವನಗಳಿಗೆ ಅನುದಾನ ಸೇರಿದಂತೆ ಅನೇಕ ಕಾರ್ಯಕ್ರಮಗಳು ಶೀಘ್ರವಾಗಿ ಪ್ರಾರಂಭವಾಗಲಿದ್ದು, ಇವುಗಳನ್ನು ಜನ ಸಾಮಾನ್ಯರಿಗೆ ತಿಳಿಸಬೇಕು ಎಂದು ನಿರ್ದೇಶನ ನೀಡಿದರು.


  ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಟಾರ್ ಚಂದ್ರು ಅಭ್ಯರ್ಥಿಯಾಗಿ ನಿಂತಿದ್ದಾರೆ. ನಾವೆಲ್ಲ ಅವರ ಗೆಲುವಿಗಾಗಿ ಪ್ರಮಾಣಿಕ ಪ್ರಯತ್ನ ಮಾಡಬೇಕು. ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುವ ಮೂಲಕ ನಮ್ಮ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
  ಪುರಸಭಾ ಮಾಜಿ ಅಧ್ಯಕ್ಷ ನರಸಿಂಹರಾಜು, ಸದಸ್ಯರಾದ ನಟರಾಜು, ಸೈಯದ್ ಸಿದ್ದೀಕ್, ಜಾವೀದ್ ಪಾಷಾ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ಮಹೇಶ್, ಮುಖಂಡರಾದ ಕ್ಯಾರೆನಾಗರಾಜ್, ರಾಜಯ್ಯ, ಚೀರ‌್ನಹಳ್ಳಿಶಿವಣ್ಣ, ಕೆ.ಸಿ.ಹರೀಶ್, ವಿನಯ್, ತಿಮ್ಮಶೆಟ್ಟಿ, ಸ್ವಾಮಿನಾಯಕ ಮಾತನಾಡಿದರು.


  ಪುರಸಭಾ ಸದಸ್ಯರಾದ ಕೆ.ಜಿ.ಸುಬ್ರಮಣ್ಯ, ಮಿಕ್ಸರ್‌ಶಂಕರ್, ಶಿವುನಾಯಕ್, ಶಂಕರ್‌ಸ್ವಾಮಿ, ಕಾಂಗ್ರೆಸ್ ನಗರಾಧ್ಯಕ್ಷ ಎಂ.ಜೆ.ರಮೇಶ್, ಮುಖಂಡರಾದ ಪ್ರಸನ್ನಕುಮಾರ್, ಸರಿತಾ ಜವರಪ್ಪ, ಪುಟ್ಟರಾಜು, ಆದರ್ಶ, ರವಿಪೂಜಾರಿ, ಎಂ.ಎ.ನಾಗೇಂದ್ರ, ಸಮಂತ್, ಮಹದೇವ್ ಇತರರು ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts