ರಾಯಚೂರಿಗೆ ಏಮ್ಸ್ ಕುರಿತ ನಿರ್ಲಕ್ಷೃ ಸಲ್ಲ

Devadurga aims protest
ರಾಯಚೂರಿಗೆ ಏಮ್ಸ್ ಮಂಜೂರು ಮಾಡುವಂತೆ ಆಗ್ರಹಿಸಿ ದೇವದುರ್ಗದಲ್ಲಿ ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿಗೆ ದೇವದುರ್ಗ ಏಮ್ಸ್ ಮಂಜೂರಾತಿ ಹೋರಾಟ ಸಮಿತಿ ಮನವಿ ಸಲ್ಲಿಸಿತು. ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಶಿಖರೇಶ ಪಾಟೀಲ್, ರಾಘವೇಂದ್ರ ಕೋಲ್ಕಾರ್, ಕಸಾಪ ತಾಲೂಕು ಅಧ್ಯಕ್ಷ ಎಚ್.ಶಿವರಾಜ, ಪೋಮಣ್ಣ ಪವರ್, ಸುರೇಶ್ ಪಾಟೀಲ್, ವೆಂಕನಗೌಡ, ಸಿದ್ಲಿಂಗಪ್ಪಗೌಡ, ಬಂಡೇಶ್, ನರಸರೆಡ್ಡಿ, ಮುರ್ತುಜಾ ಖಾನ್ ಇದ್ದರು.
Published on

ದೇವದುರ್ಗದಲ್ಲಿ ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿಗೆ ಮನವಿ

ದೇವದುರ್ಗ: ಏಮ್ಸ್ ಸಂಸ್ಥೆ ಮಂಜೂರು ಮಾಡುವಂತೆ ಒತ್ತಾಯಿಸಿ ರಾಯಚೂರಿನಲ್ಲಿ ಹಮ್ಮಿಕೊಂಡಿರುವ ಹೋರಾಟ 900ದಿನ ಪೂರೈಸಿದ್ದು, ಹೋರಾಟಕ್ಕೆ ಬೆಂಬಲಿಸಿ ಪಟ್ಟಣದ ಮಿನಿವಿಧಾನಸೌಧದಲ್ಲಿ ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿಗೆ ದೇವದುರ್ಗ ಏಮ್ಸ್ ಮಂಜೂರಾತಿ ಹೋರಾಟ ಸಮಿತಿಯಿಂದ ಸೋಮವಾರ ಮನವಿ ಸಲ್ಲಿಸಲಾಯಿತು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ರಾಯಚೂರು ಅತ್ಯಂತ ಹಿಂದುಳಿದಿದೆ. ಈ ಭಾಗಕ್ಕೆ ಏಮ್ಸ್ ಸಂಸ್ಥೆ ಮಂಜೂರು ಮಾಡಿದರೆ ಶೈಕ್ಷಣಿಕ ಹಾಗೂ ಔದ್ಯೋಗಿಕ ಅಭಿವೃದ್ಧಿಗೆ ಅನುಕೂಲವಾಗಲಿದೆ. ಏಮ್ಸ್‌ಗಾಗಿ ಜಿಲ್ಲೆಯಲ್ಲಿ ಕಳೆದ 12ವರ್ಷಗಳಿಂದ ಹೋರಾಟ ಮಾಡುತ್ತಾ ಬಂದರೂ ಕೇಂದ್ರ ಸರ್ಕಾರ ನಿರ್ಲಕ್ಷಿಸುತ್ತಿರುವುದು ಸರಿಯಲ್ಲ ಎಂದು ದೂರಲಾಯಿತು.

ರಾಯಚೂರಿಗೆ ಏಮ್ಸ್ ಸಂಸ್ಥೆ ಮಂಜೂರು ಮಾಡುವಂತೆ ರಾಜ್ಯ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಜಿಲ್ಲೆಯ ಜನರು ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ. ದೆಹಲಿಯ ಜಂತರ್‌ಮಂತರ್‌ನಲ್ಲೂ ಧರಣಿ ನಡೆಸಲಾಗಿದೆ. ಕೇಂದ್ರ ಸಚಿವರಿಗೆ ಭೇಟಿಯಾಗಿ ಮನವಿ ಮಾಡಿದರೂ ಸ್ಪಂದಿಸದಿರುವುದನ್ನು ಖಂಡಿಸಲಾಯಿತು.

ಕೂಡಲೇ ಕೇಂದ್ರ ಸರ್ಕಾರ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾದ ಏಮ್ಸ್ ಸಂಸ್ಥೆಯನ್ನು ಜಿಲ್ಲೆಗೆ ಮಂಜೂರು ಮಾಡಬೇಕು. ಸಂಸ್ಥೆ ಸ್ಥಾಪನೆಗೆ ಒಂದು ಸಾವಿರ ಕೋಟಿ ರೂ. ಮೀಡಲಿಡಬೇಕು ಎಂದು ಒತ್ತಾಯಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net