More

    ಮೂಲಸೌಲಭ್ಯ ಕಲ್ಪಿಸಲು ಒತ್ತಾಯ

    ಚಾಮರಾಜನಗರ: ಬಡಾವಣೆಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಕೊಳ್ಳೇಗಾಲ ಪಟ್ಟಣದ ಶ್ರೀ ಶಿವಕುಮಾರಸ್ವಾಮಿ ಬಡಾವಣೆ ನಿವಾಸಿಗಳು ಸ್ವಚ್ಛತಾ ಆಂದೋಲನ ನಡೆಸಿದರು.

    ಬಡಾವಣೆಯಲ್ಲಿ ಬೆಳೆದಿದ್ದ ಗಿಡ-ಗಂಟಿಗಳು ಹಾಗೂ ಕಸದ ತ್ಯಾಜ್ಯಗಳನ್ನು ತೆರವು ಮಾಡಿದ ನಿವಾಸಿಗಳು ನಗರಸಭೆ ಹಾಗೂ ಜನಪ್ರತಿನಿಧಿಗಳ ಆಡಳಿತ ನಿರ್ವಹಣೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

    ರೈತ ಮುಖಂಡ ಶೈಲೇಂದ್ರ ಶ್ರೀಕಂಠಸ್ವಾಮಿ ಮಾತನಾಡಿ, ಕಳೆದ 20 ವರ್ಷಗಳಿಂದ ಕ್ಷೇತ್ರದಲ್ಲಿ ಆಯ್ಕೆಯಾದ ಎಲ್ಲ ಶಾಸಕರಿಗೂ ಶ್ರೀ ಶಿವಕುಮಾರಸ್ವಾಮಿ ಬಡಾವಣೆ ನಿವಾಸಿಗಳು ಬಡಾವಣೆ ಅಭಿವೃದ್ಧಿಗೆ ಒತ್ತು ನೀಡುವಂತೆ ಮನವಿ ಮಾಡಿದ್ದಾರೆ. ಆದರೆ, ಜನಪ್ರತಿನಿಧಿಗಳು ರಸ್ತೆ, ಚರಂಡಿ, ನೀರು ಇನ್ನಿತರ ಮೂಲಸೌಕರ್ಯ ಕಲ್ಪಿಸಲು ವಿಫಲರಾಗಿದ್ದಾರೆ. ನಗರಸಭೆಯೂ ನಾಗರಿಕರ ಮನವಿಯನ್ನು ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ಗಾಂಧೀಜಿ ಜಯಂತಿ ಪ್ರಯುಕ್ತ ಸ್ವಯಂ ಪ್ರೇರಿತವಾಗಿ ಸ್ವಚ್ಛತಾ ಆಂದೋಲನ ಕೈಗೊಂಡಿದ್ದೇವೆ. ಇನ್ನಾದರೂ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಎಚ್ಚೆತ್ತು ಬಡಾವಣೆಗೆ ಸೌಕರ್ಯ ಕಲ್ಲಿಸದಿದ್ದರೆ ಮುಂದಿನ ಲೋಕಸಭೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಿವಾಸಿಗಳು ಬಹಿಷ್ಕರಿಸಲಿದ್ದಾರೆ ಎಂದು ಎಚ್ಚರಿಸಿದರು.

    ಶ್ರೀ ಶಿವಕುಮಾರ ಸ್ವಾಮೀಜಿ ಬಡಾವಣೆ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಎಸ್.ಶಿವಕುಮಾರಸ್ವಾಮಿ ಮಾತನಾಡಿ, ನಗರಸಭೆ ನಿರ್ಲಕ್ಷ್ಯದಿಂದಾಗಿ ಬಡಾವಣೆ ನಿವಾಸಿಗಳು ಹೈರಾಣಾಗಿದ್ದಾರೆ. ಇನ್ನಾದರೂ ಸಂಬಂಧಿಸಿದವರು ಎಚ್ಚೆತ್ತುಕೊಳ್ಳಲಿ ಎಂದು ನಾವೇ ಬಡಾವಣೆಯಲ್ಲಿ ಸ್ವಚ್ಛತಾ ನಡೆಸಿದ್ದೇವೆ ಎಂದರು.

    ರೈತ ಮುಖಂಡ ಬಸವರಾಜು, ನಿವಾಸಿಗಳಾದ ನಟೇಶ್ ಮೂರ್ತಿ, ಕಿರಣ್ ಕುಮಾರ್, ಪ್ರಸಾದ್, ಕೆ.ಸಿ.ವೀರಪ್ಪ ಹೊಸಹಳ್ಳಿ ಮಹೇಶ್, ಪುಟ್ಟಬುದ್ದಿ, ನಾಗರಾಜು, ಮಂಜುನಾಥ್ ಹೆಗಡೆ, ಶಿವಕುಮಾರ್, ಶಾಂತಮೂರ್ತಿ, ಶೇಖರ್ ಮತ್ತಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts