ಬರ ಸಮಸ್ಯೆ ನಿವಾರಣೆಗೆ ಆಗ್ರಹ

ಅರಸೀಕೆರೆ: ಬರ ಸಮಸ್ಯೆ ನಿವಾರಣೆಗೆ ಅಧಿಕಾರಿಗಳು ಮುಂದಾಗಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಎ.ಎಸ್.ಬಸವರಾಜು ನೇತೃತ್ವದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ತಹಸೀಲ್ದಾರ್ ಎಂ.ಜಿ.ಸಂತೋಷ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ತಾಲೂಕಿನ ಗಂಡಸಿ, ಕಣಕಟ್ಟೆ, ಬಾಣಾವರ ಸೇರಿದಂತೆ ಹತ್ತಾರು ಹಳ್ಳಿಗಳಲ್ಲಿ ಕುಡಿಯುವ ನೀರಿನ ಅಭಾವ ಎದುರಾಗಿದೆ. ಅಲ್ಲದೆ ಜಾನುವಾರುಗಳು ಮೇವಿಗಾಗಿ ಪರದಾಡುವಂತಾಗಿದೆ. ಆದ್ದರಿಂದ ತಕ್ಷಣವೇ ಗೋಶಾಲೆ ಆರಂಭಿಸುವ ಮೂಲಕ ಜಾನುವಾರುಗಳ ರಕ್ಷಣೆಗೆ ಮುಂದಾಗಬೇಕು.ಇಲ್ಲದಿದ್ದಲ್ಲಿ ಬೀದಿಗಿಳಿದು ಹೋರಾಟ ನಡೆಸುವುದಾಗಿ ಬಸವರಾಜು ಎಚ್ಚರಿಸಿದರು.

ಸಂಕಷ್ಟ ನಿವಾರಿಸಲು ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ತಾಲೂಕು ಆಡಳಿತ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಕರೆದು ಮಾಹಿತಿ ಸಂಗ್ರಹಿಸುವ ಜತೆಗೆ ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಹಸೀಲ್ದಾರ್ ಎಂ.ಜಿ.ಸಂತೋಷ್ ಕುಮಾರ್ ಮಾಹಿತಿ ನೀಡಿದರು.

ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಹಾಗೂ ಖಾಸಗಿಯವರ ಕೊಳವೆ ಬಾವಿಯಿಂದ ನೀರು ಖರೀದಿಸಿ ಪೂರೈಸಲಾಗುತ್ತಿದೆ. ಜಾನುವಾರುಗಳಿಗೆ ಮೇವು ಒದಗಿಸಲು ಹೋಬಳಿವಾರು ಮೇವು ಬ್ಯಾಂಕ್ ತೆರೆಯಲು ಸ್ಥಳವನ್ನು ನಿಗದಿಗೊಳಿಸಲಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *