More

    ಪರಿಸರಕ್ಕೆ ಪೂರಕ ಕ್ರಮ ಜರುಗಿಸಲು ಆಗ್ರಹ

    ಹುಬ್ಬಳ್ಳಿ: ತಾಪಮಾನ ಏರಿಕೆ ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ರಮ ಜರುಗಿಸದೇ ಇರುವುದನ್ನು ಖಂಡಿಸಿ ಅಕ್ಕ ಫೌಂಡೇಷನ್ ಟ್ರಸ್ಟ್ ಪದಾಧಿಕಾರಿಗಳು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಗುರುವಾರ ಮೌನ ಪ್ರತಿಭಟನೆ ನಡೆಸಿದರು.
    ಪ್ಲಾಸ್ಟಿಕ್ ನಿಷೇಧ ಮಾಡಿಲ್ಲ. ಸ್ಮಾರ್ಟ್‌ಸಿಟಿ ಯೋಜನೆಯಡಿ ಇಂಗುಗುಂಡಿ ನಿರ್ಮಿಸಿಲ್ಲ. ತ್ಯಾಜ್ಯ ನಿರ್ವಹಣೆ ಸರಿಯಾಗಿ ನಿರ್ವಹಿಸಿಲ್ಲ. ಹು-ಧಾ ಮಹಾನಗರ ಪಾಲಿಕೆಯೂ ಕಾಳಜಿ ತೋರಿಲ್ಲ. ಕೂಡಲೇ ಪರಿಸರಕ್ಕೆ ಹಾನಿ ಮಾಡುವ ವಸ್ತುಗಳನ್ನು ನಿಷೇಧ ಮಾಡಬೇಕು. ಇಲ್ಲವಾದರೆ ಕಾನೂನು ಹೋರಾಟ ಮಾಡಲಾಗುವುದು ಎಂದು ಆಗ್ರಹಿಸಿದ ಮನವಿಯನ್ನು ತಹಸೀಲ್ದಾರ್‌ಗೆ ಸಲ್ಲಿಸಲಾಯಿತು.
    ಟ್ರಸ್ಟ್ ಅಧ್ಯಕ್ಷ ವೀರಪ್ಪ ಅರಕೇರಿ, ಮೃತ್ಯುಂಜಯ ಸಾಲಿ, ಚನ್ನಬಸವರಾಜ ಅರಕೇರಿ, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಪ್ರವೀಣ ಗಾಯಕವಾಡ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts