More

    ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

    ಮದ್ದೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಸದಸ್ಯರು ತಾಲೂಕಿನ ಹಲವು ಗ್ರಾಮ ಪಂಚಾಯಿತಿಗಳಿಗೆ ಮುತ್ತಿಗೆ ಹಾಕಿ ಬುಧವಾರ ಪ್ರತಿಭಟನೆ ನಡೆಸಿದರು.


    ಕೊಪ್ಪ, ಆತಗೂರು, ನಗರಕೆರೆ, ಕೆ.ಬೆಳ್ಳೂರು, ಕೂಳಗೆರೆ, ಎಸ್.ಐ.ಹೊನ್ನಲಗೆರೆ, ಸಿ.ಎ.ಕೆರೆ, ಕ್ಯಾತಘಟ್ಟ, ಮೆಣಸಗೆರೆ, ಕಾಡುಕೊತ್ತನಹಳ್ಳಿ, ಮಾದರಹಳ್ಳಿ, ಡಿ.ಎ.ಕೆರೆ, ತೊರೆಬೋಮ್ಮನಹಳ್ಳಿ ಇನ್ನಿತರ ಗ್ರಾಮ ಪಂಚಾಯಿತಿಗಳ ಮುಂದೆ ಕೃಷಿ ಕೂಲಿಕಾರರ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು. ಬಳಿಕ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.


    ಸಂಘದ ಅಧ್ಯಕ್ಷ ಎಂ.ಪುಟ್ಟಮಾದು ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿರುವ ಕೂಲಿಕಾರರಿಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಕಾಲಕ್ಕೆ ಕೆಲಸ ನೀಡದೆ ವಂಚಿಸುತ್ತಿದ್ದಾರೆ. ಜತೆಗೆ, ನರೇಗಾ ಕೂಲಿ ಕಾರ್ಮಿಕರಿಗೆ ಸರಿಯಾದ ಸಮಯಕ್ಕೆ ಕೂಲಿ ಪಾವತಿ ಮಾಡುತ್ತಿಲ್ಲ ಎಂದು ಆರೋಪಿಸಿದರು.


    ಕಾಯಕ ಬಂಧುಗಳಿಗೆ ಪ್ರೋತ್ಸಾಹಧನದೊಂದಿಗೆ ತರಬೇತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.


    ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಹನುಮೇಶ, ತಾಲೂಕು ಕಾರ್ಯದರ್ಶಿ ತೈಲೂರು ಟಿ.ಪಿ.ಅರುಣ್ ಕುಮಾರ, ರಾಜ್ಯ ಸಮಿತಿ ಸದಸ್ಯರಾದ ಬಿ.ಎ.ಮಧುಕುಮಾರ, ಟಿ.ಸಿ. ವಸಂತ, ಹೇಮಾವತಿ, ಜಯಮ್ಮ, ಪ್ರೇಮಮ್ಮ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts