More

    ಸಂಸದ ಪ್ರತಾಪ್ ಸಿಂಹ ವಿರುದ್ಧ ತನಿಖೆಗೆ ಆಗ್ರಹ

    ಸೋಮವಾರಪೇಟೆ: ಸಂಸತ್ ಭವನ ಭದ್ರಕೋಟೆ ಭೇದಿಸಿ ನುಗ್ಗಿ ಕೋಲಾಹಲ ಎಬ್ಬಿಸಿರುವ ಆರೋಪಿಗೆ ಪಾಸ್ ನೀಡಿರುವ ಮೈಸೂರು-ಕೊಡಗು ಸಂಸದ ಪ್ರತಾಪ್‌ಸಿಂಹ ಅವರನ್ನು ಕೂಡಲೆ ತನಿಖೆಗೆ ಒಳಪಡಿಸಬೇಕು ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್.ಎ.ನಾಗರಾಜ್ ಒತ್ತಾಯಿಸಿದ್ದಾರೆ.

    ಅರೋಪಿ ಮೈಸೂರಿನ ಮನೋರಂಜನ್ ಸಿಕ್ಕಿಬಿದ್ದಿದ್ದಾನೆ. ಯುಎಪಿಎ ಆಡಿ ಹಲವು ಪ್ರಕರಣ ದಾಖಲಿಸಲಾಗಿದೆ. ಆದರೆ ಪ್ರತಾಪ್ ಸಿಂಹ ಅವರ ವಿರುದ್ಧ ತನಿಖೆಯಾಗುತ್ತಿಲ್ಲ. ಕೇಂದ್ರ ಸರ್ಕಾರದ ವಿರುದ್ಧವೇ ಸಂಶಯ ವ್ಯಕ್ತವಾಗುತ್ತಿದೆ. ಮುಂದಿನ ಒಂದು ವಾರದ ಒಳಗೆ ಸಂಸದ ಪ್ರತಾಪ್‌ಸಿಂಹ ಅವರನ್ನು ವಿಚಾರಣೆಗೆ ಒಳಪಡಿಸದಿದ್ದರೆ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು.

    ಸಂಸತ್ ಒಳಗೆ ಸಂಸದರಿಗೆ ರಕ್ಷಣೆ ಇಲ್ಲ ಎಂದ ಮೇಲೆ, ದೇಶದ ಜನಸಾಮಾನ್ಯರಿಗೆ ಇವರು ರಕ್ಷಣೆ ನೀಡಲು ಸಾಧ್ಯವೆ? ಎಂದು ಪ್ರಶ್ನಿಸಿದರು.
    ಇದೊಂದು ಪೊಲೀಸ್ ಹಾಗೂ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಬಿಜೆಪಿ ಹೊರತುಪಡಿಸಿ ಇತರ ಪಕ್ಷಗಳ ಸಂಸದರು ಅರೋಪಿಗಳಿಗೆ ಸಂಸತ್ ಪ್ರವೇಶಕ್ಕೆ ಪಾಸ್ ನೀಡಿದ್ದರೆ ಇದೇ ಸಂಸದರು ಭಾಷಣ ಮಾಡಿ, ದೇಶದಲ್ಲಿ ಅಶಾಂತಿ ಮೂಡಿಸುತ್ತಿದ್ದರು. ಇವರು ಪಾಸ್ ನೀಡಿರುವ ಹಿನ್ನೆಲೆ ಗಮನಿಸಿದಾಗ ಷಡ್ಯಂತರ ಅಡಗಿದೆ ಎಂದು ದೂರಿದರು.

    ನಗರ ಕಾಂಗ್ರೆಸ್ ಕಾರ್ಯದರ್ಶಿ ಮಹಮ್ಮದ್ ಶಫಿ, ಉಪಾಧ್ಯಕ್ಷ ಜಮೀರ್, ಕಾರ್ಮಿಕ ಘಟಕದ ಅಧ್ಯಕ್ಷ ಜೇಕಬ್ ಸೈಮನ್, ಬ್ಲಾಕ್ ಎಸ್.ಸಿ.ಘಟಕದ ಅಧ್ಯಕ್ಷ ಎಚ್.ಬಿ.ರಾಜಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts