More

    ಸಂಸದ ಬ್ರಿಜ್ ಭೂಷಣ ಸಿಂಗ್ ಬಂಧನಕ್ಕೆ ಆಗ್ರಹ

    ಹಾವೇರಿ: ದೇಶದ ಹೆಮ್ಮೆಯ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ, ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ ಸಿಂಗ್ ಅವರನ್ನು ಕೂಡಲೇ ಬಂಧಿಸುವಂತೆ ಡಿವೈಎಫ್‌ಐ ಆಗ್ರಹಿಸಿದೆ.
    ನಗರದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಗುರುವಾರ ಡಿವೈಎಫ್‌ಐ, ಎಸ್‌ಎಒಐ ಹಾಗೂ ಸಿಐಟಿಯು ಜಿಲ್ಲಾ ಸಮಿತಿ ವತಿಯಿಂದ ಜಂಟಿಯಾಗಿ ಪ್ರತಿಭಟನೆ ನಡೆಸಿ, ಉಪತಹಸೀಲ್ದಾರ್ ಅಮೃತಗೌಡ ಪಾಟೀಲ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಸಲ್ಲಿಸಲಾಯಿತು.
    ಒಲಿಂಪಿಕ್ ಪದಕ ವಿಜೇತರು, ವಿಶ್ವ ಚಾಂಪಿಯನ್ ಕುಸ್ತಿಪಟುಗಳಾದ ಸಾಕ್ಷಿ ಮಲ್ಲಿಕ್, ವಿನಿಷ್ ಪೊಗಟ್ ಮುಂತಾದ ಕ್ರೀಡಾಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬ್ರಿಜ್ ಭೂಷಣ್ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ನವದೆಹಲಿಯ ಜಂತರ್ ಮಂಥರ್‌ನಲ್ಲಿ ಭಜರಂಗ್ ಪೂನಿಯಾ ಸೇರಿದಂತೆ ದೇಶದ ಹಲವು ಕುಸ್ತಿ ಕ್ರೀಡಾಪಟುಗಳು ಪ್ರತಿಭಟನೆ ನಡೆಸುತ್ತಿದ್ದರೂ, ಆರೋಪಿಯನ್ನು ಈವರೆಗೆ ಬಂಧಿಸಿಲ್ಲ ಎಂದು ಖಂಡಿಸಿದ್ದಾರೆ.
    ಭಾರತ ಕುಸ್ತಿ ಫೆಡರೇಖನ್ ಮುಖ್ಯಸ್ಥ ಹಾಗೂ ಇನ್ನಿತರ ಸಿಬ್ಬಂದಿ ಅಪ್ರಾಪ್ತ ಬಾಲಕಿಯರು ಸೇರಿದಂತೆ ಪ್ರಖ್ಯಾತ ಮಹಿಳಾ ಕುಸ್ತಿಪಟುಗಳನ್ನು ಲೈಂಗಿಕ ಕಿರುಕುಳ ಹಾಗೂ ಹಿಂಸೆಗೆ ಒಳಪಡಿಸಿರುವುದು ಅಘಾತಕಾರಿ ಘಟನೆಯಾಗಿದೆ. ರಾಷ್ಟ್ರಪತಿ ಹಾಗೂ ಲೋಕಸಭಾ ಸ್ಪೀಕರ್ ಕೂಡಲೇ ಮಧ್ಯಪ್ರವೇಶಿಸಿ, ಆರೋಪಿ ಬ್ರಿಜ್ ಭೂಷಣ್ ಸಿಂಗ್‌ರನ್ನು ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ತಕ್ಷಣ ಕಿತ್ತು ಹಾಕಿ ಬಂಧಿಸಬೇಕು. ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ. ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಕಾವ್ಯಾ ಹನಗೋಡಿಮಠ, ರಾಜು ಮಲ್ಲೂರು, ಐಶ್ವರ್ಯ ಕಹಾರ, ಮೇಘನಾ ಆರ್.ಕೆ, ರಜಿಯಾ, ವೀಣಾ ಬಡಿಗೇರ, ಇನ್ನಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts