ಬೆಂಗಳೂರಿನಲ್ಲಿ 24 ಗಂಟೆ ಹೋಟೆಲ್ ತೆರೆಯಲು ಅವಕಾಶ ಕೊಡಿ: ಬೃಹತ್ ಬೆಂಗಳೂರು ಹೋಟೆಲ್ ಅಸೋಸಿಯೇಷನ್

dk
Published on

ಬೆಂಗಳೂರು: ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ದಿನದ 24 ಗಂಟೆಯು ಹೊಟೇಲ್ ವ್ಯವಹಾರ ನಡೆಸುವುದು ಸೇರಿದಂತೆ, ಕೆಲವು ಬೇಡಿಕೆ ಈಡೇರಿಸುವಂತೆ ಬೃಹತ್ ಬೆಂಗಳೂರು ಹೋಟೆಲ್ ಸಂಘ ಸರ್ಕಾರವನ್ನು ಒತ್ತಾಯಿಸಿದೆ.

ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದ ಬೃಹತ್ ಬೆಂಗಳೂರು ಹೊಟೇಲ್ ಸಂಘದ ಅಧ್ಯಕ್ಷ ಪಿ.ಸಿ.ರಾವ್ ನೇತೃತ್ವದ ನಿಯೋಗವು ಮನವಿಯನ್ನು ಸಲ್ಲಿಸಿದೆ. ಹೋಟೆಲ್ ಸಂಘದ ಮನವಿಗೆ ಸಕರಾತ್ಮಕವಾಗಿ ಸ್ಪಂದಿಸಿದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​​ ಅವರು ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಹೋಟೆಲ್ ವಲಯವನ್ನು ಕೈಗಾರಿಕೆ ಎಂದು ಮಾನ್ಯ ಮಾಡಬೇಕು. ಉದ್ಯಮಕ್ಕೆ ಸಿಂಗಲ್ ವಿಂಡೋ ವ್ಯವಸ್ಥೆ ಜಾರಿ ಮಾಡಬೇಕು ಎಂಬ ಬೇಡಿಕೆ ಈಡೇರಿಸುವುದರೊಂದಿಗೆ ಹೊಸ ಸರ್ಕಾರವು ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡಬೇಕೆಂದು ಒತ್ತಾಯಿಸಲಾಗಿದೆ. ನಿಯೋಗದಲ್ಲಿ ಸಂಘದ ಕಾರ್ಯದರ್ಶಿ ವಿರೇಂದ್ರ ಕಾಮತ್, ಸಂತೋಷ್ ಪೈ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net