ಉಡುಪಿ: ಅಂಗನವಾಡಿ ನೌಕರರನ್ನು ಖಾಯಂಗೊಳಿಸಬೇಕು. ನಿವೃತ್ತ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗ್ರಾಚ್ಯುವಿಟಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ರಾಜ್ಯ ಅಂಗನವಾಡಿ ನೌಕರರ ಸಂದ ಪ್ರಧಾನ ಕಾರ್ಯದರ್ಶಿ ಸುಶೀಲಾ ನಾಡ ಒತ್ತಾಯಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಎದುರು ಮಂಗಳವಾರ ರಾಜ್ಯ ಅಂಗನವಾಡಿ ನೌಕರರ ಸಂ ವತಿಯಿಂದ ಮಹಿಳಾ ಮತ್ತು ಮಕ್ಕಳ ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಐಸಿಡಿಎಸ್ ಪ್ರತ್ಯೇಕ ನಿರ್ದೇಶನಾಲಯ ರೂಪಿಸುವಂತೆ ಆಗ್ರಹಿಸಿ ನಡೆದ ಅಹೋರಾತ್ರಿ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಬೇಕು. ಅಂಗನವಾಡಿ ನೌಕರರನ್ನು ಚುನಾವಣೆ ಕರ್ತವ್ಯಗಳಿಂದ ಮುಕ್ತಿಗೊಳಿಸಬೇಕು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ನೌಕರರ ವೇತನ 15 ಸಾವಿರ ರೂ.ಗೆ ಏರಿಸಬೇಕು. ಬಜೆಟ್ನಲ್ಲಿ ಅಂಗನವಾಡಿ ಕಾರ್ಯಕರ್ತರು, ಬಿಸಿಯೂಟ ನೌಕರರ ಬೇಡಿಕೆಯ ಈಡೇರಿಸಬೇಕು ಎಂದು ಆಗ್ರಹಿಸಿದರು.
ಸಿಐಟಿಯು ಜಿಲ್ಲಾಧ್ಯ ಕೆ.ಶಂಕರ್ ಮಾತನಾಡಿ, ಕೇಂದ್ರ, ರಾಜ್ಯ ಸರ್ಕಾರ ಜನವಿರೋಧಿ ನೀತಿ ವಿರುದ್ಧ ಸಂಟಿತರಾಗಬೇಕು. ಕನಿಷ್ಠ ವೇತನ ಕಾಯ್ದೆ ಪ್ರಕಾರ ಹೆಚ್ಚುವರಿ ಕೆಲಸಕ್ಕೆ ಕನಿಷ್ಠ ವೇತನ ಪದ್ದತಿ ಜಾರಿಗೆ ತರಬೇಕು ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಗಾರ ಮಾತನಾಡಿ, ಅಂಗನವಾಡಿ ಕಾರ್ಮಿಕರ 10 ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು. ಡಿ. 21ಕ್ಕೆ ಬಿಸಿಯೂಟ ನೌಕರರು ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಲಿದ್ದಾರೆ. ಸರ್ಕಾರದ ನೀತಿಯಿಂದಾಗಿ ಅಂಗನವಾಡಿ ಕಾರ್ಯಕರ್ತರಿಗೆ ಗ್ಯಾಜುಯಿಟಿ ಸಿಗುತ್ತಿಲ್ಲ ಎಂದರು. ಅಂಗನವಾಡಿ ನೌಕರರ ಸಂದ ಜಿಲ್ಲಾಧ್ಯಕ್ಷೆ ಭಾರತಿ, ಖಜಾಂಚಿ ಯಶೋದಾ, ಕಾರ್ಮಿಕ ಸಂಟನೆಯ ಕವಿರಾಜ್ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರು.