More

    ಹಾಲಿನ ಪ್ರೋತ್ಸಾಹಧನ ಬಿಡುಗಡೆಗೆ ಒತ್ತಾಯ

    ಬಳ್ಳಾರಿ: ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಿಡುಗಡೆ ಗೊಳಿಸಲು ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಹಸುಗಳೊಂದಿಗೆ ಬಿಜೆಪಿ ಜಿಲ್ಲಾ ರೈತ ಮೋರ್ಚಾದಿಂದ ಮಂಗಳವಾರ ಪ್ರತಿಭಟನೆ ನಡೆಸಿದರು.

    ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮೋಕ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಧೋರಣೆಯಿಂದಾಗಿ ಜನಗಳು ಮಾತ್ರವಲ್ಲ. ಜಾನುವಾರುಗಳೂ ಸಹ ಕಾಂಗ್ರೆಸ್ ಸರ್ಕಾರಕ್ಕೆ ಶಾಪ ಹಾಕುತ್ತಿವೆ. ಈ ಸರ್ಕಾರವು ಜನರ ಕೋಪವಲ್ಲದೆ ಜಾನುವಾರುಗಳ ಶಾಪಕ್ಕೂ ಬಲಿಯಾಗಿದೆ ಎಂದರು.

    ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನವನ್ನು ನೀಡಿದ್ದರು. ಬಿಜೆಪಿ ಆಡಳಿತದಲ್ಲಿ 26 ಲಕ್ಷ ಗ್ರಾಮೀಣ ರೈತರಿಂದ ಪ್ರತಿದಿನ 80 ರಿಂದ 85 ಲಕ್ಷ ಲೀ. ಹಾಲನ್ನು ಸಂಗ್ರಹಿಸಲಾಗುತ್ತಿತ್ತು. ಈಗಿನ ಸರ್ಕಾರವು ಹಾಲು ಉತ್ಪಾದಕರಿಗೆ 716 ಕೋಟಿ ರೂ. ಪ್ರೋತ್ಸಾಹಧನವನ್ನು ಬಾಕಿ ಉಳಿಸಿಕೊಂಡಿದೆ. ಇದರಿಂದಾಗಿ ಕರ್ನಾಟಕದಲ್ಲಿ ಪ್ರತಿನಿತ್ಯ 10 ಲಕ್ಷ ಲೀ. ನಷ್ಟು ಹಾಲಿನ ಉತ್ಪಾದನೆಯ ಪ್ರಮಾಣ ಕುಸಿದಿದೆ ಎಂದರು.

    ಕಾಂಗ್ರೆಸ್ ಸರ್ಕಾರಕ್ಕೆ ಮಾನ-ಮರ್ಯಾದೆ ಇದ್ದರೆ ರೈತರಿಗೆ ನೀಡಬೇಕಾದ ಬಾಕಿ ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡಬೇಕು. ರೈತರಿಗೆ ನೀಡಬೇಕಾದ ಹಣ ಬಿಡುಗಡೆ ಮಾಡಲು ಯೋಗ್ಯತೆ ಇಲ್ಲದ ಸರ್ಕಾರವಾಗಿದೆ. ಈ ಬಾಕಿ ಹಣಕ್ಕೂ ಕೂಡ ನರೇಂದ್ರ ಮೋದಿಯವರತ್ತ ಮುಖ ಮಾಡುತ್ತಿದೆ. ಕೂಡಲೇ ಬಿಡುಗಡೆ ಮಾಡದಿದ್ದಲ್ಲಿ, ಜನ-ಜಾನುವಾರು ಒಟ್ಟಾಗಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಎಂಎಲ್‌ಸಿ ವೈ.ಎಂ.ಸತೀಶ್, ಬಿಜೆಪಿ ರೈತಮೋರ್ಚಾ ಜಿಲ್ಲಾಧ್ಯಕ್ಷ ಗುಂಡಿಗನೂರು ಪ್ರಕಾಶಗೌಡ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮುರಹರ ಗೌಡ, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಸುಮಾ, ರಾಮಲಿಂಗಪ್ಪ ಸೇರಿ ಪಕ್ಷದ ಪದಾಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts