ಗಣರಾಜ್ಯೋತ್ಸವ ಆಚರಿಸಿದ ಗ್ರಾಪಂ ಸಿಬ್ಬಂದಿಗೆ ಅಮಾನತಿಗೆ ಒತ್ತಾಯ

blank

ಸರಗೂರು: ತಾಲೂಕಿನ ಹೆಗ್ಗನೂರು ಗ್ರಾಮ ಪಂಚಾಯಿತಿಯಲ್ಲಿ ಗಣರಾಜ್ಯೋತ್ಸವ ದಿನವನ್ನು ಆಚರಿಸಿದೆ ನಿರ್ಲಕ್ಷ್ಯ ತೋರಿರುವ ಗ್ರಾಮ ಪಂಚಾಯಿತಿ ಸಿಬ್ಬಂದಿ ಮತ್ತು ಅಡಳಿತ ವರ್ಗದವರನ್ನು ಅಮಾನತುಗೊಳಿಸುವಂತೆ ಹೆಗ್ಗನೂರು ಗ್ರಾಮಸ್ಥರು ಹಾಗೂ ತಾಲೂಕು ಪ್ರಗತಿಪರ ಸಂಘಟನೆಗಳು ಜತೆಗೊಡಿ ಗುರುವಾರ ಪಂಚಾಯಿತಿ ಮುಂಭಾಗದಲ್ಲಿ ಪಂಚಾಯಿತಿ ಅಡಳಿತದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು.

ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಹೆಗ್ಗನೂರು ನಿಂಗರಾಜು ಮಾತನಾಡಿ, ಪಂಚಾಯಿತಿಯಲ್ಲಿ ಹೆಗ್ಗನೂರು ಗ್ರಾಮ ಪಂಚಾಯಿತಿಯಲ್ಲಿ ಗಣರಾಜ್ಯೋತ್ಸವವನ್ನು ಆಚರಣೆ ಮಾಡದೆ ಅದಕ್ಕೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಸವರ್ಣೀಯ ಚುನಾಯಿತ ಪ್ರತಿನಿಧಿಗಳು ಬೆಳಗ್ಗೆ 11.30 ಆದರೂ ಧ್ವಜ ಹಾರಿಸದೆ ಸರ್ವಾಧಿಕಾರಿ ಧೋರಣೆ ತೋರಿ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಅದನ್ನು ಸಾರ್ವಜನಿಕರು ಹಾಗೂ ಗ್ರಾಮಸ್ಥರು ಪ್ರಶ್ನೆ ಮಾಡಿದರೆ ಮೇಲಿನ ಅಧಿಕಾರಿಗಳು ನಮಗೆ ಹೇಳಿಲ್ಲ. ು ಪಂಚಾಯಿತಿ ಸಿಬ್ಬಂದಿ ಪೂಜಾ ಸಾಮಗ್ರಿ ತಂದು ಕೊಟ್ಟಿಲ್ಲ ಎಂದು ಉಡಾಫೆ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದರು.

ಆದಿ ಕರ್ನಾಟಕ ಮಹಾಸಭಾ ಮಾಜಿ ಅಧ್ಯಕ್ಷ ಮುದ್ದಮಲ್ಲಯ್ಯ ಮಾತನಾಡಿ, ಜ.26 ರಂದು ಇಡೀ ದೇಶವೇ ವಿಜೃಂಭಣೆಯಿಂದ ಅಚರಿಸುವ ರಾಷ್ಟ್ರೀಯ ಹಬ್ಬವಾದ ಗಣರಾಜ್ಯೋತ್ಸವ ದಿನವನ್ನು ಆಚರಿಸಿದೆ ನಿರ್ಲಕ್ಷ್ಯ ವಹಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಬಿಲ್ ಕಲೆಕ್ಟರ್, ಕಂಪ್ಯೂಟರ್ ಆಪರೇಟರ್ ಹಾಗೂ ಇತರ ಸಿಬ್ಬಂದಿ ಮತ್ತು ಚುನಾಯಿತ ಪ್ರತಿನಿಧಿಗಳನ್ನು ಪ್ರಶ್ನಿಸಿದ ಗ್ರಾಮದ ಯುವಕರು ಮತ್ತು ಗ್ರಾಮಸ್ಥರಿಗೆ ಸೂಕ್ತ ಕಾರಣಗಳನ್ನು ನೀಡದೆ ಎಲ್ಲರೂ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿದ್ದಾರೆ ಆರೋಪಿಸಿದರು.

ನಂತರ ಗ್ರಾಪಂ ಸಿಬ್ಬಂದಿ ರಾಜೇಂದ್ರ ಪ್ರಸಾದ್, ಸೋಮೇಗೌಡ ಮತ್ತು ಬಿಲ್ ಕಲೆಕ್ಟರ್ ಮಹೇಶ್, ನೀರುಗಂಟಿ ಸಿಬ್ಬಂದಿ ಇವರನ್ನು ವಿಷಯಕ್ಕೆ ಸಂಬಂಧಿಸಿದಂತೆ ವಿಚಲಿಸಿದಾಗ ಪಿಡಿಒ ಅವರು ನಮಗೆ ಕಾರ್ಯಕ್ರಮ ಮಾಡಬೇಕೆಂದು ಯಾವುದೇ ನಿರ್ದೇಶನಗಳನ್ನು ಕೊಟ್ಟಿಲ್ಲ. ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ನೀವು ಏನೇ ಕೇಳುವುದಿದ್ದರೂ ಪಿಡಿಒ ಮತ್ತು ಸಿಬ್ಬಂದಿ ಅವರನ್ನು ಕೇಳಿ ಎಂದರು.

ಕೂಡಲೇ ನಿರ್ಲಕ್ಷೃ ತೋರಿದ ಗ್ರಾಪಂ ಸಿಬ್ಬಂದಿ ಮತ್ತು ಅಧಿಕಾರಿಯನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಬೇಕು. ಒಂದು ವೇಳೆ ಸೂಕ್ತ ಕ್ರಮ ಕೈಗೊಳ್ಳದೆ ಇದ್ದಲ್ಲಿ ಶೀಘ್ರದಲ್ಲೇ ತಾಲೂಕು ಮಟ್ಟದಲ್ಲಿ ಎಲ್ಲ ಪ್ರಗತಿಪರ ಸಂಘಟನೆಗಳ ಜತೆಗೂಡಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮನವಿ ಸ್ವೀಕರಿಸಿದ ಇಒ ಪ್ರೇಮ್‌ಕುಮಾರ್ ಮಾತನಾಡಿ, ಜಿಪಂ ಸಿಇಒ ಅವರ ಗಮನಕ್ಕೆ ತರುತ್ತೇನೆ. ಸಿಬ್ಬಂದಿಯನ್ನು ಕೆಲಸದಿಂದ ಅಮಾನತುಗೊಳಿಸುವ ಅಧಿಕಾರ ನನಗೆ ಇಲ್ಲ. ಮೇಲಿನ ಅಧಿಕಾರಿಗಳಿಗೆ ವರದಿ ಮಾಡಿ ಅವರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಆದಿಕರ್ನಾಟಕ ಮಹಾಸಭಾ ಪ್ರಧಾನ ಕಾರ್ಯದರ್ಶಿ ಚನ್ನೀಪುರ ಮಲ್ಲೇಶ್, ಹೆಗ್ಗುಡಿಲು ಸೋಮಣ್ಣ, ಹಳಿಯೂರು ಚಿನ್ನಯ್ಯ, ಹೆಗ್ಗನೂರು ಪುಟ್ಟಮಾದು, ಪ್ರಸನ್ನ.ಮಾತನಾಡಿದರು.

 

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…