More

    ಹೆತ್ತೂರು ಪಿಎಚ್‌ಸಿ ವೈದ್ಯನ ಅಮಾನತಿಗೆ ಆಗ್ರಹ

    ಸಕಲೇಶಪುರ: ಯುವಕನ ಸಾವಿಗೆ ಕಾರಣರಾಗಿರುವ ವೈದ್ಯ ಡಾ.ಮಧುಸೂದನ್ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಕುಟುಂಬಸ್ಥರು ಕ್ರಾಫರ್ಡ್ ಆಸ್ಪತ್ರೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

    ತಾಲೂಕಿನ ಕುಂಬರಗೆರೆ ಗ್ರಾಮದ ಸಂತೋಷ್ (18) ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದರು. ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸಂತೋಷ ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಚಿಕಿತ್ಸೆಗಾಗಿ ಬಂದಿದ್ದ ಯುವಕನಿಗೆ ವೈದ್ಯ ಮಧುಸೂದನ್ ಚುಚ್ಚುಮದ್ದು ನೀಡಿದ್ದರು. ಇದರಿಂದ ಮತ್ತಷ್ಟು ಆರೋಗ್ಯ ಹದಗೆಟ್ಟಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕು ಕ್ರಾಫರ್ಡ್ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆೆ ಮೃತಪಟ್ಟಿದ್ದ. ಆದರೂ ಕ್ರಾಫರ್ಡ್ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದಾಗ ಯುವಕ ಮೃತಪಟ್ಟಿದ್ದಾಗಿ ವೈದ್ಯರು ಸ್ಪಷ್ಟಪಡಿಸಿದ್ದರು.

    ಪ್ರತಿಭಟನೆ: ಯುವಕನ ಸಾವಿಗೆ ಹೆತ್ತೂರು ಪಿಎಚ್‌ಸಿ ವೈದ್ಯ ಮಧುಸೂದನ್ ಕಾರಣ ಎಂದು ಆರೋಪಿಸಿ ಕ್ರಾಫರ್ಡ್ ಆಸ್ಪತ್ರೆ ಮುಂಭಾಗ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಕುಟುಂಭಸ್ಥರು ಪ್ರತಿಭಟನೆ ನಡೆಸಿ ಘಟನೆಗೆ ಕಾರಣರಾಗಿರುವ ವೈದ್ಯರನ್ನು ಅಮಾನತುಗೊಳಿಸಬೇಕು ಎಂದು ಪ್ರತಿಭಟಿಸಿದರು.
    ಸ್ಥಳಕ್ಕಾಗಮಿಸಿದ ಉಪವಿಭಾಗಾಧಿಕಾರಿ ಶ್ರುತಿ, ಜಿಲ್ಲಾ ಆರೋಗ್ಯಾಧಿಕಾರಿ ಅನಿಲ್ ಪ್ರತಿಭಟನಾಕಾರರೊಂದಿಗೆ ಚರ್ಚೆ ನಡೆಸಿ, ಈಗಾಗಲೇ ವೈದ್ಯರ ನಿರ್ಲಕ್ಷ್ಯದ ಬಗ್ಗೆ ಉನ್ನತ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂದೆ ಪಡೆಯಲಾಯಿತು.

    ಮಾಜಿ ಶಾಸಕ ಎಚ್.ಕೆ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹೆತ್ತೂರು ದೊಡ್ಡಯ್ಯ, ವಳಲಹಳ್ಳಿ ವೀರೇಶ್ ಸೇರಿದಂತೆ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts