More

    ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

    ಹುಕ್ಕೇರಿ: ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಹುಕ್ಕೇರಿ ತಾಲೂಕು ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಸೋಮವಾರ ಮನವಿ ಸಲ್ಲಿಸಲಾಯಿತು. ಸ್ಥಳೀಯ ಹಳೇ ತಹಸೀಲ್ದಾರ್ ಕಾರ್ಯಾಲಯದಿಂದ ಮಿನಿ ವಿಧಾನಸೌಧದವರೆಗೆ ಒಕ್ಕೂಟದ ಸದಸ್ಯರು ಮತ್ತು ಶಿಕ್ಷಕರು ಮೆರವಣಿಗೆಯಲ್ಲಿ ಆಗಮಿಸಿದರು. ಸಭೆ ಉದ್ದೇಶಿಸಿ ಮಾತನಾಡಿದ ಸ್ಥಳೀಯ ಜಿಮಖಾನಾ ಆಂಗ್ಲ ಮಾಧ್ಯಮ ಶಾಲೆಯ ರವಿ ಕರಾಳೆ, ಸರ್ಕಾರಿ ಶಾಲೆಗಳಿಂದ ಆಗದ್ದನ್ನು ಖಾಸಗಿ ಶಾಲೆಗಳ ಆಡಳಿತ ಮಂಡಳಿ ಮಾಡುತ್ತಿದೆ. ಕರೊನಾ ಮಹಾಮಾರಿಯಿಂದ ಮುಚ್ಚಿದ ಶಾಲೆಗಳಲ್ಲಿ ಉಂಟಾಗಿರುವ ಆರ್ಥಿಕ ಸಂಕಷ್ಟ ಪರಿಹರಿಸಲು ಸರ್ಕಾರ ಮುಂದಾಗದಿರುವುದು ವಿಷಾದನೀಯ. ಸರ್ಕಾರ ಈ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

    ಒಕ್ಕೂಟದ ಅಧ್ಯಕ್ಷ ಮಹಾವೀರ ನಿಲಜಗಿ ಮಾತನಾಡಿ, ಸರ್ಕಾರ ಮಲತಾಯಿ ಧೋರಣೆ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಿಸುವ
    ಹುನ್ನಾರ ನಡೆಸಿದೆ. ಆದರೆ, ಸರ್ಕಾರಿ ಶಾಲೆಗಳಿಗಿಂತ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳತ್ತ ಪಾಲಕರ ಒಲವು ಇರುವುದು ಸರ್ಕಾರಕ್ಕೆ ಸಹಿಸಲು ಆಗುತ್ತಿಲ್ಲ ಎಂದು ದೂರಿದರು. ಸರ್ಕಾರ ತಾರತಮ್ಯ ನೀತಿ ಅನುಸರಿಸಿದಲ್ಲಿ ತೀವ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಮುಖಂಡ ಅಶೋಕ ಪಾಟೀಲ ಮಾತನಾಡಿದರು. ನಂತರ ಶಿರಸ್ತೇದಾರ

    ಎನ್.ಐ.ಪಾಟೀಲ ಅವರಿಗೆ ಸಲ್ಲಿಸಲಾಯಿತು. ಒಕ್ಕೂಟದ ಉಪಾಧ್ಯಕ್ಷ ಬಂಡು ಹತನೂರೆ, ತಾಲೂಕಿನ ವಿವಿಧ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಪಿಂಟು ಶೆಟ್ಟಿ, ಬಸು ಪಟ್ಟಣಶೆಟ್ಟಿ, ಕುಮಾರ ಹುಣಶ್ಯಾಳಿ, ಅಪ್ಪಾಸಾಹೇಬ ಸಾರಾಪುರೆ, ಗಿರೀಶ ಖಡೇದ, ಮುಕುಂದ ಹಿರೇಮಠ, ಕಾಡಪ್ಪ ಮಗದುಮ್ಮ ಸೇರಿ ತಾಲೂಕಿನ 45ಕ್ಕೂ ಹೆಚ್ಚು ಖಾಸಗಿ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts