ಜಮ್ಮು ಕಾಶ್ಮೀರದಲ್ಲಿ ಭೂಕುಸಿತ; ಮೃತಪಟ್ಟವರಿಗೆ ಪ್ರಧಾನಿ ಮೋದಿ ಸಂತಾಪ! | Narendra Modi

modi
Published on

Narendra Modi : ಜಮ್ಮು ಮತ್ತು ಕಾಶ್ಮೀರದ ಮಾತಾ ವೈಷ್ಣೋದೇವಿ ದೇವಸ್ಥಾನ ಮಾರ್ಗದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಹಿನ್ನಲೆ, ಈ ಜೀವಹಾನಿ ಕುರಿತು ಪ್ರಧಾನಿ ನರೇಂದ್ರ ಮೋದಿ ಬುಧವಾರ (ಆಗಸ್ಟ್​ 27) ಸಂತಾಪ ಸೂಚಿಸಿದ್ದಾರೆ.

ಶ್ರೀ ಮಾತಾ ವೈಷ್ಣೋದೇವಿ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿರುವುದು ನನಗೆ ಬೇಸರ ತಂದಿದೆ. ನನ್ನ ಆಲೋಚನೆಗಳು ಮೃತರ ಕುಟುಂಬದ ಕಡೆ ಇದೆ. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಆಶಿಸುತ್ತೇನೆ. ಇನ್ನು ಅಲ್ಲಿನ ಆಡಳಿತವು ಎಲ್ಲರಿಗೂ ಸಹಾಯ ಮಾಡುತ್ತಿದೆ. ಎಲ್ಲರ ಸುರಕ್ಷತೆ ಹಾಗೂ ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ತಮ್ಮ X (ಎಕ್ಸ್)​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ವೈಷ್ಣೋದೇವಿ ತೀರ್ಥಯಾತ್ರೆಯ ಭಾಗದಲ್ಲಿ ಅಪಾರ ಹಾನಿ ಸಂಭವಿಸಿರುವುದು ದುಃಖಕರವಾದ ವಿಷಯವಾಗಿದೆ. ಈ ವಿಚಾರದ ಬಗ್ಗೆ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹಾಗೂ ಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಮಾತನಾಡಿ ಕೇಂದ್ರಾಡಳಿತ ಪ್ರದೇಶದ ಆಡಳಿತಕ್ಕೆ ಸಹಾಯ ಮಾಡಲು ಹೇಳುತ್ತೇನೆ ಎಂದು ತಮ್ಮ ಎಕ್ಸ್​ ಖಾತೆಯಲ್ಲಿ ಅಮಿತ್​ ಶಾ ಬರೆದುಕೊಂಡಿದ್ದಾರೆ.

ಈ ವೇಳೆ ಪ್ರವಾಹದಲ್ಲಿ ಗಾಯಗೊಂಡವರಿಗೆ ಸಹಾಯ ಮಡಲು ಸ್ಥಳೀಯ ಅಧಿಕಾರಿಗಳು ರಕ್ಷಣಾ ಪ್ರಯತ್ನಗಳನ್ನು ಸಕ್ರೀಯವಾಗಿ ನಡೆಸುತ್ತಿದ್ದಾರೆ. ಹಾಗೂ ಆ ಪ್ರದೇಶಕ್ಕೆ ಎನ್​ಡಿಆರ್​ಎಫ್​ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗಿದೆ ಎಂದು ಹೇಳಿದರು. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net