More

    ವಿವಿಧ ಬೇಡಿಕೆ ಈಡೇರಿಸಲು ದಸಂಸ ಆಗ್ರಹ

    ಅಕ್ಕಿಅಲೂರ: ಹಿಂದುಳಿದ ವರ್ಗಗಳ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

    ಹಾವೇರಿ ಜಿಲ್ಲಾ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಿಂಗಪ್ಪ ಹಾನಗಲ್ಲ ಮಾತನಾಡಿ, ದಲಿತರಿಗಾಗಿ ಅನೇಕ ಸಾಮಾಜಿಕ ನ್ಯಾಯದಡಿ ಸಂವಿಧಾನದಲ್ಲಿ ಹಲವು ಸವಲತ್ತುಗಳಿದ್ದರೂ, ಸಂಘ-ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿಯವರಿಗೆ ಸೂಕ್ತ ಸ್ಥಾನಮಾನ ದೊರೆಯುತ್ತಿಲ್ಲ. ಅರ್ಜಿ ಸಲ್ಲಿಸಿದ ಪ್ರತಿಯೊಬ್ಬ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಬೇಕಾಗಿದೆ. ಪ್ರತಿ ಗ್ರಾಮದಲ್ಲೂ ದಲಿತರಿಗೆ ಪ್ರತ್ಯೇಕ ಸ್ಮಶಾನ ಭೂಮಿ ನೀಡಬೇಕು. ಪೌರ ಕಾರ್ಮಿಕರನ್ನು ಕಾಯಂಗೊಳಿಸಬೇಕು. ಸರ್ಕಾರಗಳು ಅನೇಕ ಕಾರ್ಮಿಕ ವಿರೋಧಿ ಧೋರಣೆ ಹೊಂದಿದ್ದು, ಭೂ ಸ್ವಾಧೀನ, ಎಪಿಎಂಸಿ ಕಾಯ್ದೆ, ವಿದ್ಯುತ್ ಖಾಸಗೀಕರಣ ಮಸೂದೆ ಹಾಗೂ ಕಾರ್ಮಿಕರ ಕೆಲಸದ ಅವಧಿಯನ್ನು 8ರಿಂದ 12 ಗಂಟೆಗಳ ಏರಿಸಿರುವ ಕಾಯ್ದೆ ರದ್ದುಗೊಳಿಸಬೇಕು. ಎಸ್‌ಸಿ ಸಮುದಾಯಕ್ಕೆ ಮೀಸಲಿರುವ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ಪ್ರತಿಯೊಬ್ಬ ದಲಿತರಿಗೆ ಸರ್ಕಾರದಿಂದ ದೊರೆಯುವ ಸಾಲ ಸೌಲಭ್ಯ ನೀಡಬೇಕೆಂದು ಎಂದು ಆಗ್ರಹಿಸಿದರು.

    ಹಾನಗಲ್ಲ ತಾಲೂಕು ಅಧ್ಯಕ್ಷ ವೀರಪ್ಪ ಗಾಳಮ್ಮನವರ ಮಾತನಾಡಿ, ಎಸ್‌ಸಿ, ಎಸ್‌ಟಿ ಗುತ್ತಿಗೆದಾರರ ಕಾಮಗಾರಿ ಮಿತಿಯನ್ನು 2 ಕೋಟಿ ರೂ.ಗೆ ಹೆಚ್ಚಿಸಬೇಕೆಂಬ ನಮ್ಮ ಬಹುದಿನದ ಕನಸು ಈಡೇರಿಲ್ಲ. ಈಗಾಗಲೇ ನಾವು ತಿಳಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಬೇಕು ಮತ್ತು ಬಿ. ಬಸವಲಿಂಗಪ್ಪ ಜನ್ಮ ಶತಮಾನೋತ್ಸವವನ್ನು ಸರ್ಕಾರವೇ ಆಚರಿಸಬೇಕು ಎಂದು ಒತ್ತಾಯಿಸಿದರು.

    ಡಿಎಸ್‌ಎಸ್ ತಾಲೂಕು ಸಂಚಾಲಕ ಮಂಜುನಾಥ ಚಲವಾದಿ, ಜಿಲ್ಲಾ ಸಂಘಟನಾ ಸಂಚಾಲಕ ಮಂಜುನಾಥ ಕಾಳೇರ, ಈಶ್ವರ ಕಾಳೇರ, ಹಾನಗಲ್ಲ ತಾಲೂಕು ಸಂಘಟನಾ ಸಂಚಾಲಕ ಚಂದ್ರಪ್ಪ ಚಲವಾದಿ, ಶಂಕರ ಕಾಳೇರ, ವಿರೂಪಾಕ್ಷಪ್ಪ ಕೊಡಿಕೊಪ್ಪ, ಮೋಹನ ಕಾಳೇರ, ಭರಮ್ಮಣ್ಣ ಮಾದರ, ಮಂಜುನಾಧ ಮಾದರ, ಹನುಮಂತಪ್ಪ ತಾವರೆ, ಪರಶುರಾಮ ದ್ವಾರಳ್ಳಿ, ಗುಡ್ಡಪ್ಪ ಹೆಬ್ಬಾಳ, ನಂದೀಶ ಕಾಳೇರ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts