More

  ಕಾಡಾನೆ ಹಾವಳಿ ತಡೆಗೆ ಆಗ್ರಹ

  ಸೋಮವಾರಪೇಟೆ: ತಾಲೂಕಿನ ಯಡವನಾಡು ಗ್ರಾಮದಲ್ಲಿ ಫಸಲಿಗೆ ಬಂದ ಬೆಳೆಗಳನ್ನು ಕಾಡಾನೆಗಳು ನಾಶ ಪಡಿಸಿದ್ದು, ರೈತರು ಆರ್ಥಿಕ ನಷ್ಟ ಅನುಭವಿಸುವಂತಾಗಿದೆ. ಬುಧವಾರ ರಾತ್ರಿ ಇಲ್ಲಿನ ಜಮೀನೊಂದಕ್ಕೆ ನುಗ್ಗಿರುವ ಕಾಡಾನೆಗಳ ಹಿಂಡು ಜೋಳ, ಫಸಲಿಗೆ ಬಂದಿದ್ದ ಗೆಣಸು, ಪಪ್ಪಾಯ, ಬಾಳೆ ಗಿಡಗಳನ್ನು ನಾಶಪಡಿಸಿವೆ. ನಿರಂತರವಾಗಿ ಕಾಡಾನೆ ಹಾವಳಿ ಮಿತಿಮೀರಿದೆ. ಆನೆ ಹಾವಳಿ ತಡೆಗೆ ಶಾಶ್ವತ ಯೋಜನೆ ರೂಪಿಸಬೇಕು. ವೈಜ್ಞಾನಿಕವಾಗಿ ಬೆಳೆಹಾನಿ ಪರಿಹಾರ ನೀಡಬೇಕೆಂದು ಕೃಷಿಕರಾದ ಯು.ಪಿ.ರಾಜು, ನಂದಕುಮಾರ್, ಜಯಂತ್ ಮತ್ತಿತರರು ಆಗ್ರಹಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts