More

    ಕೊಬ್ಬರಿ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹ

    ಅಂಕೋಲಾ: ಕೊಬ್ಬರಿಯ ಬೆಂಬಲ ಬೆಲೆಯನ್ನು ಹೆಚ್ಚಿಸಲು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಉತ್ತರ ಕನ್ನಡ ಜಿಲ್ಲಾ ಸಮಿತಿ ಸದಸ್ಯರು ಬುಧವಾರ ತಹಸೀಲ್ದಾರ್ ಪ್ರವೀಣ ಹುಚ್ಚಣ್ಣನವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
    ಕೆಪಿಆರ್‌ಎಸ್ ಜಿಲ್ಲಾ ಅಧ್ಯಕ್ಷ ಶಾಂತಾರಾಮ ನಾಯಕ ಮಾತನಾಡಿ, ಕೇಂದ್ರ ಸರ್ಕಾರದ ತಪ್ಪು ಆಮದು ನೀತಿ ಮತ್ತು ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಇಂದು ರಾಜ್ಯದ ತೆಂಗು ಬೆಳೆಗಾರರು ಸಂಕಷ್ಟ ಅನುಭವಿಸುತ್ತಿದ್ದಾರೆ. ರಾಜ್ಯ ತೋಟಗಾರಿಕಾ ಇಲಾಖೆಯು, ಕೇಂದ್ರ ಸರ್ಕಾರದ ಕೃಷಿ ವೆಚ್ಚ ಮತ್ತು ದರ ಆಯೋಗಕ್ಕೆ ಕ್ವಿಂಟಾಲ್ ಕೊಬ್ಬರಿಗೆ 16730 ರೂ. ನೀಡಬೇಕು ಎಂದು ಉತ್ಪಾದನಾ ವೆಚ್ಚದ ಆಧಾರದ ಮೇಲೆ ಶಿಫಾರಸು ಮಾಡಿದೆ. ಆದರೆ, ಕೇಂದ್ರ ಸರ್ಕಾರ ಬೆಂಬಲ ಬೆಲೆಯಾಗಿ ಕೇವಲ 11750 ರೂ. ಮಾತ್ರ ನಿಗದಿಪಡಿಸಿದೆ. ರೈತರ ಆಗ್ರಹಕ್ಕೆ ಮಣಿದು ರಾಜ್ಯ ಸರ್ಕಾರವು ಪ್ರತಿ ಕ್ವಿಂಟಾಲ್ ಕೊಬ್ಬರಿಗೆ 1250 ರೂ. ಹೆಚ್ಚುವರಿ ನಿಗದಿ ಮಾಡಿದೆ. ಆದರೆ ಮಾರುಕಟ್ಟೆಯಲ್ಲಿ ಕೇವಲ ಮಾರುಕಟ್ಟೆಯಲ್ಲಿ 6500 ರೂ. ಮಾತ್ರ ಇದೆ. ಸರ್ಕಾರಗಳು ಘೋಷಿಸಿರುವ ಬೆಂಬಲ ಜಾರಿಗೆ ಬರಬೇಕಾದರೆ ಕೇಂದ್ರಗಳನ್ನು ವ್ಯಾಪಕವಾಗಿ ತೆರೆಯಬೇಕು. ಸಮರ್ಪಕ ಖರೀದಿ ಕೇಂದ್ರಗಳು ಇಲ್ಲದಿದ್ದರೆ ಬೆಂಬಲ ಬೆಲೆ ಕೇವಲ ಕಾಗದದಲ್ಲಿ ಮಾತ್ರ ಉಳಿಯುತ್ತಿದೆ ಎಂದರು. ಕೆಪಿಆರ್‌ಸಿ ತಾಲೂಕ ಘಟಕದ ಅಧ್ಯಕ್ಷ ಗೌರೀಶ ನಾಯಕ, ಕಾರ್ಯದರ್ಶಿ ಸಂತೋಷ ನಾಯ್ಕ, ಮಾಹದೇವ ಮಹಾಬಲೇಶ್ವರ ಗೌಡ, ರಾಜಗೋಪಾಲ ಶೇಟ್ ಬೇಲೇಕೇರಿ ಗ್ರಾಪಂ ಸದಸ್ಯ ಲಕ್ಷ್ಮಣ ನಾಯಕ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts