ಮದ್ದೂರು: ತಾಲೂಕಿನ ಬ್ಯಾಡರಹಳ್ಳಿ ಗ್ರಾಮದಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಅರಣ್ಯಾಧಿಕಾರಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮದ ಮುಖಂಡ ಬ್ಯಾಡರಹಳ್ಳಿ ಶಿವಕುಮಾರ್ ತಿಳಿಸಿದ್ದಾರೆ.
ಕಳೆದ ಹಲವು ದಿನಗಳಿಂದ ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಬಂದು ಕೋಳಿ, ನಾಯಿಗಳನ್ನು ತಿಂದು ಹೋಗಿದೆ ಹಾಗೂ ಇತ್ತೀಚೆಗೆ ಒಂದು ಆಡು ಎತ್ತಿಕೊಂಡು ಹೋಗಿದ್ದು, ಇನ್ನೊಂದು ಆಡನ್ನು ತೀವ್ರವಾಗಿ ಗಾಯಗೊಳಿಸಿದೆ. ಇದರಿಂದ ರೈತರಿಗೆ ಆರ್ಥಿಕವಾಗಿ ನಷ್ಟವಾಗುವ ಜತೆಗೆ ಗ್ರಾಮಸ್ಥರಿಗೆ ಆತಂಕ ಮನೆ ಮಾಡಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಬ್ಯಾಡರಹಳ್ಳಿ ಸೇರಿದಂತೆ ತಾಲೂಕಿನಾದ್ಯಂತ ಚಿರತೆ ಹಾವಳಿ ಹೆಚ್ಚಿದ್ದು ಅರಣ್ಯಾಧಿಕಾರಿಗಳು ಈ ಕೂಡಲೇ ಅಗತ್ಯವಿರುವ ಕಡೆಗಳಲ್ಲಿ ಬೋನುಗಳನ್ನು ಇಟ್ಟು ಹಿಡಿಯಲು ಕ್ರಮಕೈಗೊಳ್ಳಬೇಕು. ಚಿರತೆಗಳು ಇರುವ ಸ್ಥಳದಲ್ಲಿ ಗ್ರಾಮಸ್ಥರು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕೆಂದು ಆಗ್ರಹ ಮಾಡಿದರು.
ಹಲವಾರು ಬಾರಿ ಅರಣ್ಯಾಧಿಕರಿಗಳಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಉಪ ವಲಯ ಅರಣ್ಯಾಧಿಕಾರಿ ಮುರಳಿ ನಾಯಕ್ ಬಂದು ಪರಿಶೀಲನೆ ಮಾಡಿ ಹೋಗಿದ್ದು, ಇನ್ನೊಮ್ಮೆ ಚಿರತೆ ಕಂಡು ಬಂದರೆ ಬೋನು ಇಡುಲಾಗುವುದು ಎಂಬು ಭರವಸೆ ನೀಡಿದ್ದಾರೆ ಎಂದರು. ಕ್ರಮ ಕೈಗೊಳ್ಳದಿದ್ದರೆ ಅಧಿಕಾರಿಗಳ ವಿರುದ್ಧ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಚಿರತೆ ಉಪಟಳ ತಡೆಗೆ ಆಗ್ರಹ

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits
Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…
ಯುವಜನರಲ್ಲಿ ಹೃದಯಾಘಾತ ಹೆಚ್ಚಾಗಲು ಪ್ರಮುಖ ಕಾರಣಗಳಿವು… ತಕ್ಷಣ ಎಚ್ಚೆತ್ತುಕೊಳ್ಳದಿದ್ರೆ ಅಪಾಯ ಫಿಕ್ಸ್! Cardiac Arrest
Cardiac Arrest : ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದ ಹೃದಯ ಸಂಬಂಧಿ ಸಮಸ್ಯೆಗಳು ಈಗ…