More

    ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಆಗ್ರಹ

    ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಪರಾಧ ಸಂಖ್ಯೆ ಹೆಚ್ಚುತ್ತಿದ್ದು, ಅವಳಿ ನಗರದ ಪೊಲೀಸರ ವೈಫಲ್ಯದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ. ತಕ್ಷಣ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳನ್ನು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಿಂದ ವರ್ಗಾವಣೆ ಮಾಡಿ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಿಸಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಜತ ಉಳ್ಳಾಗಡ್ಡಿಮಠ ಆಗ್ರಹಿಸಿದ್ದಾರೆ.

    ಈ ಕುರಿತು ಅವರು ಗೃಹ ಸಚಿವ ಡಾ. ಜಿ. ಪರಮೇಶ್ವರಗೆ ಪತ್ರ ಬರೆದಿದ್ದಾರೆ.

    ವಿದ್ಯಾರ್ಥಿನಿ ನೇಹಾ ಹಿರೇಮಠ ಸಾವಿನ ನಂತರ ಕಾಲೇಜ್, ಉದ್ಯೋಗಗಳಿಗೆ ಹೆಣ್ಣು ಮಕ್ಕಳನ್ನು ಕಳುಹಿಸಲು ಪಾಲಕರು ಹಾಗೂ ಕುಟುಂಬಸ್ಥರು ಹಿಂಜರಿಯುವ ಸ್ಥಿತಿ ಇಲ್ಲಿ ನಿರ್ವಣವಾಗಿದೆ. ಪದೇಪದೆ ಹುಬ್ಬಳ್ಳಿಯಲ್ಲಿ ಯುವತಿಯರ ಕೊಲೆ ಪ್ರಕರಣಗಳಿಂದ ಮಹಿಳೆಯರು ಮತ್ತು ಮಕ್ಕಳು ಮತ್ತಷ್ಟು ಭಯಭೀತರಾಗಿ ಜೀವನ ನಡೆಸುವ ಸಂದರ್ಭ ಬಂದಿದೆ ಎಂದು ಹೇಳಿದ್ದಾರೆ.

    ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ, ರೌಡಿಗಳನ್ನು ಮಟ್ಟ ಹಾಕುವಲ್ಲಿ, ಪುಂಡಪೊಕರಿಗಳನ್ನು ನಿಯಂತ್ರಣ ಮಾಡುವಲ್ಲಿ ಅಧಿಕಾರಿಗಳು ಸಂಪೂರ್ಣ ವಿಫಲವಾಗಿದ್ದು ಶೀಘ್ರವೇ ಅವಳಿನಗರಕ್ಕೆ ಖಡಕ್ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts