More

    ಪ್ರವೀಣ್ ನೆಟ್ಟಾರ್ ಹತ್ಯೆ: ಕಠಿಣ ಕ್ರಮಕ್ಕಾಗಿ ಬಿಜೆಪಿ ಪದಾಧಿಕಾರಿಗಳ ರಾಜೀನಾಮೆ ಅಸ್ತ್ರ..

    ಮೈಸೂರು: ಬಿಜೆಪಿ ಕಾರ್ಯಕರ್ತರು ಒಬ್ಬರ ಹಿಂದೊಬ್ಬರಂತೆ ಕೊಲೆಯಾಗುತ್ತಿದ್ದು, ಇದೀಗ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರ್ ಕೊಲೆ ಬಳಿಕ, ಆತಂಕಕ್ಕೆ ಒಳಗಾಗಿರುವ ಬಿಜೆಪಿ ಕಾರ್ಯಕರ್ತರು, ಇನ್ನೊಂದೆಡೆ ಸಿಡಿದೆದ್ದು ಕಠಿಣ ಕ್ರಮಕ್ಕೆ ಆಗ್ರಹಿಸಲಾರಂಭಿಸಿದ್ದಾರೆ.

    ಇದುವರೆಗಿನ ಯಾವುದೇ ಕಾರ್ಯಕರ್ತನ ಸಾವಿಗೂ ನ್ಯಾಯ ಸಿಗದ ಕಾರಣ ಹಾಗೂ ಇನ್ನೂ ಕೊಲೆಗಳಾಗುತ್ತಿರುವುದು ಮುಂದುವರಿದಿರುವ ಹಿನ್ನೆಲೆಯಲ್ಲಿ ತೀವ್ರ ಬೇಸರಗೊಂಡಿರುವ ಬಿಜೆಪಿ ಕಾರ್ಯಕರ್ತರು, ಇದಕ್ಕೆಲ್ಲ ಕೊನೆ ಹೇಳುವಂಥ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾರಂಭಿಸಿದ್ದಾರೆ.

    ಅಲ್ಲದೆ ಈ ಕುರಿತು ಒತ್ತಡ ಹೇರುವ ಸಲುವಾಗಿ ರಾಜೀನಾಮೆಯನ್ನೂ ನೀಡಲಾರಂಭಿಸಿದ್ದಾರೆ. ಈಗಾಗಲೇ ತುಮಕೂರು ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಸಹ ಸಂಚಾಲಕಿ ಶಕುಂತಲಾ ನಟರಾಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೀಗ ಮುಂದುವರಿದ ಬೆಳವಣಿಗೆಯಲ್ಲಿ ರಾಜ್ಯದ ವಿವಿಧ ಭಾಗದಲ್ಲಿ ಬಿಜೆಪಿಯ ಪದಾಧಿಕಾರಿಗಳೂ ರಾಜೀನಾಮೆ ನೀಡಲಾರಂಭಿಸಿದ್ದಾರೆ. ಕೆಲವೆಡೆ ಸಾಮೂಹಿಕ ರಾಜೀನಾಮೆ ನೀಡಲಿಕ್ಕೂ ಮುಂದಾಗಿದ್ದಾರೆ.

    ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್​ ಹತ್ಯೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಯುವ ಮೋರ್ಚಾ ಸದಸ್ಯರು ಸಾಮೂಹಿಕವಾಗಿ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದಾರೆ. ನರಸಿಂಹರಾಜ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಲೋಹಿತ್ ಸೇರಿದಂತೆ ಇತರ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದು, ಆ ಮೂಲಕ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಿದ್ದಾರೆ.

    ಹುಸಿಯಾದ ಬಿಜೆಪಿ ಕಠಿಣ ಕ್ರಮದ ಭರವಸೆ; ಬೇಸತ್ತು ಪಕ್ಷದ ಜಿಲ್ಲಾ ಸಹ ಸಂಚಾಲಕಿ ರಾಜೀನಾಮೆ..

    ಪಿಎಸ್​ಐ ಹಗರಣದ ಬಗ್ಗೆ ನನಗೆ ಮೊದಲೇ ಗೊತ್ತಿತ್ತು: ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

    ಆಸ್ಪತ್ರೇಲಿ ಬಿಸಿನೀರಿಲ್ಲ, ಊಟ ಸರಿ ಇಲ್ಲ ಎಂದು ಹೇಳಿ ವೈದ್ಯಕೀಯ ಪರೀಕ್ಷೆಗೆ ಸಹಕರಿಸದ ನವ್ಯಶ್ರೀ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts