More

    ಭಾರತದ ಪ್ರಜಾತಂತ್ರ ವ್ಯವಸ್ಥೆ ಅಪಾಯದಲ್ಲಿ: ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಆರೋಪ

    ಕಾರ್ಕಳ: ಭಾರತದ ಸ್ವಾತಂತ್ರೃ ಮತ್ತು ಪ್ರಜಾತಂತ್ರ ವ್ಯವಸ್ಥೆ ಬಿಜೆಪಿ ಆಡಳಿತದಲ್ಲಿ ಅಪಾಯದಲ್ಲಿದೆ. ದೇಶ ಸರ್ವಾಧಿಕಾರದತ್ತ ಹೊರಳುತ್ತಿದೆ ಎಂದು ಮಾಜಿ ಸಚಿವ ಕೆಪಿಸಿಸಿ ಉಪಾಧ್ಯಕ್ಷ ವಿನಯ ಕುಮಾರ್ ಸೊರಕೆ ಆರೋಪಿಸಿದ್ದಾರೆ.

    ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಸ್ವಾತಂತ್ರೃ ಅಮೃತ ಮಹೋತ್ಸವ ಸಮಾರಂಭದ ಪೂರ್ವತಯಾರಿ ಕಾರ್ಯಕ್ರಮದಲ್ಲಿ ಮಾತನಾಡಿದರು.

    ರಾಜ್ಯದಲ್ಲಿರುವುದು ಪಕ್ಷಾಂತರಿಗಳ ಸರ್ಕಾರ. ರಾಜಧರ್ಮದ ನೆಲೆಯಲ್ಲಿ ಇದೊಂದು ಅನಧಿಕೃತ ಸರ್ಕಾರ. ಆದ್ದರಿಂದಲೇ ಈ ಸರ್ಕಾರಕ್ಕೆ ಜನಪರ ಚಿಂತನೆಯ ಕಾಳಜಿ ಇಲ್ಲ ಎಂದರು.

    ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿದರು. ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಹೆಬ್ರಿ ಬ್ಲಾಕ್ ಅಧ್ಯಕ್ಷ ಮಂಜುನಾಥ ಪೂಜಾರಿ, ಜಿಲ್ಲಾ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ, ಕೆಪಿಸಿಸಿ ಕಿಸಾನ್ ಸಮಿತಿ ಕಾರ್ಯದರ್ಶಿ ಉದಯ ಶೆಟ್ಟಿ ಕುಕ್ಕುಂದೂರು, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ಜಿಲ್ಲಾ ಎಸ್‌ಟಿ ವಿಭಾಗದ ಅಧ್ಯಕ್ಷ ಸೋಮನಾಥ ನಾಯ್ಕ, ಮಾಜಿ ಬ್ಲಾಕ್ ಅಧ್ಯಕ್ಷ ಶೇಖರ ಮಡಿವಾಳ, ವಕ್ತಾರ ಶುಭದಾ ರಾವ್, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಇನ್ನ, ಪ್ರಧಾನ ಕಾರ್ಯದರ್ಶಿಗಳಾದ ಪ್ರಭಾಕರ ಬಂಗೇರ, ಜೋರ್ಜ್ ಕ್ಯಾಸ್ತಲೀನೊ, ಉದ್ಯಮಿ ಸುರೇಂದ್ರ ಶೆಟ್ಟಿ, ನಗರಾಧ್ಯಕ್ಷ ಮಧುರಾಜ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಡಿಸೋಜ, ಮಾಜಿ ಪುರಸಭಾಧ್ಯಕ್ಷ ಸುಭೀತ್ ಕುಮಾರ್ ಹಾಗೂ ಹಾಲಿ ಮಾಜಿ ಪುರಸಭಾ ಸದಸ್ಯರು, ಘಟಕಗಳ ಅಧ್ಯಕ್ಷರು, ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts