ಪ್ರಜಾಪ್ರಭುತ್ವ ವ್ಯವಸ್ಥೆ ದೇಶದ ಬಹುದೊಡ್ಡ ಶಕ್ತಿ

shirur
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯ ಗಡಿಭಾಗವಾದ ಶಿರೂರು ಟೋಲ್‌ಗೇಟ್ ಬಳಿ ಭಾನುವಾರ ಮಾನವ ಸರಪಳಿ ಕಾರ್ಯಕ್ರಮಕ್ಕೆ ಶಿರೂರು ಗ್ರಾಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ ಚಾಲನೆ ನೀಡಿದರು.
Published on

ಬೈಂದೂರು: ಪ್ರಜಾಪ್ರಭುತ್ವ ವ್ಯವಸ್ಥೆ ಈ ದೇಶದ ಬಹುದೊಡ್ಡ ಶಕ್ತಿ. ಸಂವಿಧಾನಕ್ಕೆ ಗೌರವ ನೀಡುವ ಜತೆಗೆ ಮಾನವ ಸರಪಳಿ ಮೂಲಕ ವಿಶಿಷ್ಟವಾಗಿ ಜಾಗೃತಿ ಮೂಡಿಸಿರುವುದು ಶ್ಲಾಘನೀಯ ಎಂದು ಶಿರೂರು ಗ್ರಾಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ ಹೇಳಿದರು.

ಶಿರೂರು ಟೋಲ್‌ಗೇಟ್ ಬಳಿ ಭಾನುವಾರ ಮಾನವ ಸರಪಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿರೂರು ಗ್ರಾಪಂ ಉಪಾಧ್ಯಕ್ಷ ಕಾಫ್ಸಿ ನೂರ್‌ಮಹ್ಮದ್, ಅಭಿವೃದ್ಧಿ ಅಧಿಕಾರಿ ರಾಜೇಂದ್ರ, ಪಶು ವೈದ್ಯಾಧಿಕಾರಿ ಡಾ.ನಾಗರಾಜ್, ಸಮಾಜ ಕಲ್ಯಾಣ ಇಲಾಖೆ ರಾಘವೇಂದ್ರ ವರ್ಣೆಕರ್, ಗ್ರಾಮ ಲೆಕ್ಕಾಧಿಕಾರಿ ವಿಜಯ್ ಕುಮಾರ್ ಮೊದಲಾದವರಿದ್ದರು. ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ಕೆ. ನಾಯ್ಕ ಸಂವಿಧಾನದ ಪೀಠಿಕೆ ವಾಚಿಸಿದರು. ಶಿಕ್ಷಕ ರಾಮಕೃಷ್ಣ ದೇವಾಡಿಗ ಸ್ವಾಗತಿಸಿದರು. ಶಂಕರ ಬಿಲ್ಲವ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net