ಮತ ಯಂತ್ರಗಳ ಬಳಕೆ ಕುರಿತು ಪ್ರಾತ್ಯಕ್ಷಿಕೆ

ಆಲೂರು: ತಾಲೂಕಿನ ಹುಣಸುವಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ತಮ್ಮ ಮತದ ಮಹತ್ವ ಹಾಗೂ ಮತ-ಯಂತ್ರಗಳ ಬಳಕೆ ವಿಧಾನ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು.

ಈ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯ ಆಲೂರು ವಿಧಾನಸಭಾ ಕ್ಷೇತ್ರದ ಮಾಸ್ಟರ್ ಟ್ರೈನರ್ ಗೋವಿಂದರಾಜು ಮಾತನಾಡಿ, ಮತದಾರರು ಚುನಾವಣೆ ಸಂದರ್ಭದಲ್ಲಿ ತಮ್ಮ ಮತವನ್ನು ಖಾತರಿಪಡಿಸಿಕೊಳ್ಳುವ ಮುಖ್ಯ ಉದ್ದೇಶದಿಂದ ವಿವಿಪ್ಯಾಡ್ ಯಂತ್ರಗಳನ್ನು ಬಳಸಲಾಗುತ್ತಿದೆ. ಜತೆಗೆ ಮತದಾರರಲ್ಲಿ ಮತದಾನದ ಬಗ್ಗೆ ವಿಶ್ವಾಸ ಹೆಚ್ಚಿಸುವಲ್ಲಿ ಇದು ಸಹಕಾರಿಯಾಗಲಿದೆ. 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್.ವಿ.ಸಹನ, ಕಾರ್ಯದರ್ಶಿ ಸೋಮೇಗೌಡ, ಗ್ರಂಥಾಲಯ ಮೇಲ್ವಿಚಾರಕ ಸತೀಶ್ ಹಾಗೂ ಗ್ರಾಮಸ್ಥರು ಹಾಜರಿದ್ದರು.