

ಪಡುಬಿದ್ರಿ: ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆ ಎನ್ನೆಸ್ಸೆಸ್ ಆಶ್ರಯದಲ್ಲಿ ಅದಮಾರು ಶ್ರೀ ವಾಸುದೇವ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಪತಂಜಲಿ ಯೋಗ ಸಮಿತಿ ಕಾರ್ಯದರ್ಶಿ ರಂಜಿತ್ ಕೆ.ಎಸ್. ಯೋಗ ಪ್ರಾತ್ಯಕ್ಷಿಕೆ ನೀಡಿ ಯೋಗದ ಮಹತ್ವ ವಿವರಿಸಿದರು. ವಿದ್ಯಾರ್ಥಿಗಳು ತಾಡಾಸನ, ವೃಕ್ಷಾಸನ ತ್ರಿಕೋನಾಸನ, ವಜ್ರಾಸನ ಮೊದಲಾದ ಆಸನಗಳನ್ನು ಪ್ರದರ್ಶಿಸಿದರು. ಕಾಲೇಜು ಹಾಗೂ ಹೈಸ್ಕೂಲಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸಾಮೂಹಿಕ ಯೋಗಭ್ಯಾಸ ಮಾಡಿದರು.
ಆಡಳಿತ ಮಂಡಳಿಯ ಪ್ರತಿನಿಧಿ ಪ್ರೊ.ನಿತ್ಯಾನಂದ, ಪ್ರಾಂಶುಪಾಲ ಸಂಜೀವ್ ನಾಯಕ್, ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಖ್ಯಶಿಕ್ಷಕ ಮಂಜುನಾಥ ಎ.ವಿ., ಕನ್ನಡ ಮಾಧ್ಯಮ ಪ್ರೌಢಶಾಲೆಯ ಪ್ರತಿಮಾ ಭಟ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪ್ರಣಮ್ಯಾ ಸ್ವಾಗತಿಸಿದರು. ಬಿ.ಭಾರ್ಗವಿ ನಿರೂಪಿಸಿದರು. ಸ್ನೇಹಾ ವಂದಿಸಿದರು.