More

  ರಾಜ್ಯದಲ್ಲಿ ಡೆಂಘೆ ಪ್ರಕರಣಗಳ ಏರಿಕೆ

  • ಇಪ್ಪತ್ತು ದಿನಗಳಲ್ಲಿ 1,160 ಪ್ರಕರಣ ವರದಿ

  ಬೆಂಗಳೂರು: ಹವಾಮಾನ ಬದಲಾವಣೆಯಿಂದಾಗಿ ರಾಜ್ಯದಲ್ಲಿ ಡೆಂಘೆ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚುತ್ತಿದ್ದು, 20 ದಿನಗಳಲ್ಲಿ 1,160 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಪ್ರಕರಣಗಳ ಒಟ್ಟು ಸಂಖ್ಯೆ 13 ಸಾವಿರ ಗಡಿ ದಾಟಿದ್ದು, ಈವರೆಗೂ 9 ಮಂದಿ ಮೃತಪಟ್ಟಿದ್ದಾರೆ.
  ಈಗಾಗಲೇ ಒಂದು ಲಕ್ಷಕ್ಕೂ ಅಧಿಕ ಶಂಕಿತರನ್ನು ತಪಾಸಣೆಗೆ ಒಳಪಡಿಸಲಾಗಿದೆ. 75 ಸಾವಿರಕ್ಕೂ ಅಧಿಕ ಮಂದಿಯ ರಕ್ತದ ಮಾದರಿ ಪರೀಕ್ಷೆ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 7,062 ಹಾಗೂ ಇತರ ಜಿಲ್ಲೆಗಳಲ್ಲಿ 6,634 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಕಳೆದ ವರ್ಷ 9,620 ಮಂದಿ ಬಳಲಿದ್ದು, ಒಂಬತ್ತು ಮಂದಿ ಮೃತಪಟ್ಟಿದ್ದರು.
  ಬಿಬಿಎಂಪಿ ವ್ಯಾಪ್ತಿಯಲ್ಲಿ 46,164 ಶಂಕಿತರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಅವರಲ್ಲಿ 29,509 ಮಂದಿಯ ರಕ್ತದ ಮಾದರಿ ಪರೀಕ್ಷಿಸಲಾಗಿದೆ. ಕಳೆದ 20 ದಿನಗಳಲ್ಲಿ 463 ಮಂದಿಯಲ್ಲಿ ಸೋಂಕು ವರದಿಯಾಗಿದೆ.
  ಉಡುಪಿಯಲ್ಲಿ 628, ಮೈಸೂರು 610, ಕಲಬುರಗಿ 577, ದಕ್ಷಿಣ ಕನ್ನಡದಲ್ಲಿ 426 ಪ್ರಕರಣಗಳು ಖಚಿತಪಟ್ಟಿವೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 400ಕ್ಕಿಂತ ಕಡಿಮೆ ಇದೆ.
  ಚಿಕೂನ್ ಗುನ್ಯಾ ಏರಿಕೆ
  28 ಜಿಲ್ಲೆಗಳಲ್ಲಿ ಚಿಕೂನ್ ಗುನ್ಯಾ ಪ್ರಕರಣಗಳು ಪತ್ತೆಯಾಗಿವೆ. 55 ಸಾವಿರಕ್ಕೂ ಅಧಿಕ ಶಂಕಿತರನ್ನು ಗುರುತಿಸಲಾಗಿದ್ದು, 29 ಸಾವಿರಕ್ಕೂ ಅಧಿಕ ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. ಅವರಲ್ಲಿ 1,359 ಮಂದಿಯಲ್ಲಿ ಜ್ವರ ಕಾಣಿಸಿಕೊಂಡಿದೆ. ಮೈಸೂರು 184, ವಿಜಯಪುರ 146, ಶಿವಮೊಗ್ಗ 124 ಹಾಗೂ ಕಲಬುರಗಿಯಲ್ಲಿ 108ಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ.

  ರಾಜ್ಯೋತ್ಸವ ರಸಪ್ರಶ್ನೆ - 20

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts