More

    ರಾಜ್ಯದಲ್ಲಿ ಡೆಂಘಿ ಪ್ರಕರಣಗಳ ಸಂಖ್ಯೆ 16 ಸಾವಿರಕ್ಕೆ ಏರಿಕೆ

    ಬೆಂಗಳೂರು: ಹವಾಮಾನ ಬದಲಾವಣೆಯಿಂದಾಗಿ ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ 263 ಡೆಂಘಿ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 16 ಸಾವಿರ ಗಡಿ ದಾಟಿದೆ.

    ರಾಜ್ಯದಲ್ಲಿ ಈ ವರ್ಷ ಎರಡು ಲಕ್ಷಕ್ಕೂ ಅಧಿಕ ಡೆಂಘಿ ಶಂಕಿತರನ್ನು ತಪಾಸಣೆ ನಡೆಸಲಾಗಿದ್ದು, ಒಂದು ಲಕ್ಷಕ್ಕೂ ಅಧಿಕ ಮಂದಿಯ ರಕ್ತದ ಮಾದರಿ ಪರೀಕ್ಷೆ ಮಾಡಲಾಗಿದೆ. ಈ ಪೈಕಿ ಬಿಬಿಎಂಪಿ ವ್ಯಾಪ್ತಿಯಲ್ಲಿ 8,397 ಹಾಗೂ ರಾಜ್ಯದ ಇತರೆ ಜಿಲ್ಲೆಗಳಿಂದ 7,792 ಸೇರಿ ಪ್ರಕರಣಗಳ ಒಟ್ಟು ಸಂಖ್ಯೆ 16,189ಕ್ಕೆ ಏರಿಕೆಯಾಗಿದೆ. ಕಲಬುರಗಿ 725, ಮೈಸೂರು 688,ಉಡುಪಿ 635, ದಕ್ಷಿಣ ಕನ್ನಡ 499, ಶಿವಮೊಗ್ಗ 431 ಅತೀ ಹೆಚ್ಚು ಸೋಂಕು ಪ್ರಕರಣಗಳು ದೃಢಪಟ್ಟಿವೆ.

    ಕಳೆದ ವರ್ಷ ರಾಜ್ಯದಲ್ಲಿ 9,620 ಮಂದಿಯಲ್ಲಿ ಡೆಂಘಿ ಜ್ವರ ದೃಢಪಟ್ಟಿತ್ತು. ಅವರಲ್ಲಿ ಒಂಬತ್ತು ಮಂದಿ ಮೃತಪಟ್ಟಿದ್ದರು. ಈ ವರ್ಷ ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಲ್ಕು ಸೇರಿ ಒಟ್ಟು ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ.

    ಚಿಕೂನ್ ಗುನ್ಯಾ: ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ 28 ಜಿಲ್ಲೆಗಳಲ್ಲಿ ಚಿಕೂನ್‌ಗುನ್ಯಾ ಪ್ರಕರಣಗಳು ವರದಿಯಾಗಿವೆ. 65 ಸಾವಿರಕ್ಕೂ ಅಧಿಕ ಮಂದಿ ಚಿಕೂನ್‌ಗುನ್ಯಾ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 33 ಸಾವಿರಕ್ಕೂ ಅಧಿಕ ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. ಅವರಲ್ಲಿ 1,598 ಮಂದಿ ಈ ಜ್ವರ ದೃಢಪಟ್ಟಿದೆ. ಮೈಸೂರು 210, ವಿಜಯಪುರ 172, ಕಲಬುರಗಿ 143, ಶಿವಮೊಗ್ಗದಲ್ಲಿ 137 ಹಾಗೂ ದಾವಣಗೆರೆಯಲ್ಲಿ 113 ಅಧಿಕ ಪ್ರಕರಣಗಳು ವರದಿಯಾಗಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts