21.7 C
Bengaluru
Tuesday, January 21, 2020

ಆಂಬುಲೆನ್ಸ್​ ನಿರಾಕರಿಸಿದ್ದಕ್ಕೆ ರಕ್ತಸ್ರಾವವಾಗುತ್ತಿದ್ದ ಗರ್ಭಿಣಿಯನ್ನು ಬೈಕ್​ನಲ್ಲಿ ಕರೆದೊಯ್ದ ಪತಿ: ಅಮಾನವೀಯ ಘಟನೆಗೆ ಖಂಡನೆ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ರಾಂಚಿ: ರಾಷ್ಟ್ರದಲ್ಲಿ ವೈದ್ಯರ ನಿರ್ಲಕ್ಷ್ಯ ಪ್ರಕರಣಗಳು ಪದೇಪದೆ ಬೆಳಕಿಗೆ ಬರುತ್ತಲೇ ಇರುವುದು ದುರಾದೃಷ್ಟಕರ ಸಂಗತಿ. ಇದೀಗ ಆಸ್ಪತ್ರೆಯೊಂದು ಆಂಬುಲೆನ್ಸ್​ ಕಳುಹಿಸದಿದ್ದಕ್ಕೆ ತೀವ್ರ ರಕ್ತಸ್ರಾವ ಆಗುತ್ತಿದ್ದ ಗರ್ಭಿಣಿಯನ್ನು ಆಕೆಯ ಗಂಡನ್ನೇ ಬೈಕ್​ ಮೇಲೆ ಕೂರಿಸಿಕೊಂಡು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದ ಆಘಾತಕಾರಿ ಘಟನೆ ಜಾರ್ಖಂಡ್​ನ ಛಂದ್ವಾ ಪ್ರದೇಶದಲ್ಲಿ ನಡೆದಿದೆ.

ಅರೆಪ್ರಜ್ಞಾವಸ್ಥೆಯಲ್ಲಿದ್ದ ಗರ್ಭಿಣಿ ಶಾಂತಿದೇವಿಯನ್ನು (30) ಬೈಕ್​ನಲ್ಲಿ ಕೂರಿಸಿಕೊಂಡು ಆಸ್ಪತ್ರೆಗೆ ಸಾಗಿಸುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ವೈದ್ಯರ ನಿರ್ಲಕ್ಷ್ಯದ ವಿರುದ್ಧ ಭಾರಿ ಟೀಕೆಗಳು ವ್ಯಕ್ತವಾಗಿವೆ.

ಛತುಗಾ ಗ್ರಾಮದ ನಿವಾಸಿ ಶಾಂತಿ ನಾಲ್ಕುವರೆ ತಿಂಗಳ ಗರ್ಭಿಣಿ. ಆಕೆಯನ್ನು ಪತಿ ಕಮಲ್​ ಗಂಜು ಬೈಕ್​ನಲ್ಲಿ ಕೂರಿಸಿಕೊಂಡು ಛಂದ್ವಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದು ದಾಖಲಿಸಿದ್ದಾನೆ. ತೀವ್ರ ರಸ್ತಸ್ರಾವವಾಗುತ್ತಿದ್ದುದರಿಂದ ತಕ್ಷಣವೇ ಆಕೆಯನ್ನು ಲಾಟೆಹಾರ್​ ಸದಾರ್​ ಆಸ್ಪತ್ರೆಗೆ ದಾಖಲಿಸುವಂತೆ ತಿಳಿಸಿದ್ದರು. ಅದೃಷ್ಟವಶಾತ್​ ಈ ಬಾರಿ ಆಸ್ಪತ್ರೆಯವರೇ ಆಂಬುಲೆನ್ಸ್​ ವ್ಯವಸ್ಥೆ ಮಾಡಿ ಅಂದಾಜು 27 ಕಿ.ಮೀ ದೂರದ ಸದಾರ್​ ಆಸ್ಪತ್ರೆಗೆ ಕಳುಹಿಸಿಕೊಟ್ಟರು.

ನನ್ನ ಪತ್ನಿ ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ರಕ್ತಸ್ರಾವ ಕೂಡ ಆಗುತ್ತಿದೆ. ನಾನು 108ಕ್ಕೆ ಕರೆ ಮಾಡಿ ಆಂಬುಲೆನ್ಸ್​ ಕಳುಹಿಸಿಕೊಡುವಂತೆ ಮನವಿ ಮಾಡಿದೆ. ಆದರೆ, ಅವರು ಕಳುಹಿಸಲಿಲ್ಲ ಎಂದು ತನ್ನ ಅಸಹಾಕತೆಯನ್ನು ಕಮಲ್​ ಗಂಜು ತೋಡಿಕೊಂಡಿದ್ದಾರೆ.

ಸದಾರ್​ ಆಸ್ಪತ್ರೆಯನ್ನು ತಲುಪಿದ ಬಳಿಕ ಆಕೆಯನ್ನು ಪರೀಕ್ಷಿಸಿದ, ಅಲ್ಲಿನ ವೈದ್ಯರು ಇಲ್ಲಿ ಆಕೆಯ ಗುಂಪಿನ ರಕ್ತದ ಕೊರತೆ ಇದೆ. ಆಕೆಯನ್ನು ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸ್ಥಳಾಂತರಿಸುವಂತೆ ಸಲಹೆ ನೀಡಿದ್ದಾಗಿ ಅವರು ಹೇಳಿದ್ದಾರೆ.

ಆಕೆಯನ್ನು ಆಸ್ಪತ್ರೆಗೆ ಕರೆತಂದಾಗ ಅವಳ ಬಳಿ ಕೆಂಪು ರಕ್ತಕಣದ ಪ್ರಮಾಣ ಭಾರಿ ಕಡಿಮೆ ಇತ್ತು. ನಮ್ಮ ರಕ್ತ ಬ್ಯಾಂಕ್​ನಲ್ಲಿ ಆಕೆಯ ರಕ್ತದ ಗುಂಪಿನ ರಕ್ತ ಸಾಕಷ್ಟು ಪ್ರಮಾಣದಲ್ಲಿ ಸಿಗಲಿಲ್ಲ. ಹೀಗಾಗಿ ಅವಳನ್ನು ಸ್ಥಳಾಂತರಿಸಲು ಸಲಹೆ ನೀಡಿದ್ದಾಗಿ ಜಿಲ್ಲಾ ಸರ್ಜನ್​ ಶಿವ್​ಪೂಜನ್​ ಶರ್ಮಾ ಮಾಹಿತಿ ನೀಡಿದರು. ಹಾಗೇ ಆಂಬುಲೆನ್ಸ್​ ನಿರಾಕರಿಸಿದ ಆರೋಪವನ್ನು ತಳ್ಳಿಹಾಕಿದರು. ಕೊನೆಯಲ್ಲಿ ರಾಜೇಂದ್ರ ಆಸ್ಪತ್ರೆ ಆಕೆಯನ್ನು ದಾಖಲಿಸಲಾಗಿದ್ದು, ಆಕೆಗೆ ಸೂಕ್ತ ಚಿಕಿತ್ಸೆ ಲಭಿಸಿದೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...