

ಕಿನ್ನಿಗೋಳಿ: ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ಅಧ್ಯಕ್ಷರಾಗಿ ಡೆನ್ನಿಸ್ ಡಿಸೋಜ ಹಾಗೂ ಉಪಾಧ್ಯಕ್ಷರಾಗಿ ಭಾಸ್ಕರ್ ಮಲ್ಲಿ ಅವಿರೋಧ ಆಯ್ಕೆಯಾಗಿದ್ದಾರೆ.
ಬ್ಯಾಂಕಿನಲ್ಲಿ ಶನಿವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಬ್ಯಾಂಕಿನ ನಿರ್ದೇಶಕರಾದ ಡಾ.ಎಂ.ಎನ್.ರಾಜೇಂದ್ರಕುಮಾರ್, ಮೋನಪ್ಪ ಶೆಟ್ಟಿ ಎಕ್ಕಾರು, ರಿತೇಶ್ ಶೆಟ್ಟಿ, ರತ್ನಾಕರ ಶೆಟ್ಟಿ, ಸ್ಟಾೃನಿ ಡಿಸೋಜ, ವಸಂತ, ಮಹಮ್ಮದ್ ಶರೀಫ್, ಗೀತಾ ಅಮೀನ್, ಸವಿತಾ, ಮೀರಾ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರತಿನಿಧಿ ಕಿರಣ್ ಕುಮಾರ್ ಶೆಟ್ಟಿ ಪಾಲ್ಗೊಂಡಿದ್ದರು. ಚುನಾವಣಾಧಿಕಾರಿ ಎನ್.ಜೆ.ಗೋಪಾಲ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.