ಬೆಂಗಳೂರು: ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಲೋಕಾಯುಕ್ತ ವಿಚಾರಣೆ ಎದುರಿಸಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ 4,071 ಕೋಟಿ ರೂ. ಹೂಡಿಕೆಯ 88 ಯೋಜನೆಗಳಿಗೆ ಅನುಮೋದನೆ, 10,585 ಜನರಿಗೆ ಉದ್ಯೋಗ
ಸುಮಾರು ಒಂದೂವರೆ ಗಂಟೆಗಳ ಕಾಲ ವಿಚಾರಣೆ ಎದುರಿಸಿದ ಬಳಿಕ ಕುಮಾರಸ್ವಾಮಿ ಲೋಕಾಯುಕ್ತ ಕಚೇರಿಯಿಂದ ನಿರ್ಗಮಿಸಿದರು.
ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಈ ಪ್ರಕರಣದಲ್ಲಿ ನನಗೆ ಯಾವುದೇ ಕಾರಣಕ್ಕೂ ಗಂಡಾಂತರ ಬರುವುದಿಲ್ಲ. ಕಾನೂನು ಬಾಹಿರ ಕೆಲಸ ಎಂದಿಗೂ ಮಾಡಿಲ್ಲ ಎಂದು ಹೇಳಿದರು.
2015ರ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಹಲವು ಪ್ರಕರಣಗಳನ್ನ ಪ್ರಸ್ತಾಪಿಸಿದ್ದೆ. ಇದರಿಂದ ನನ್ನ ವಿರುದ್ಧ ನನ್ನ ದೂರು ದಾಖಲು ಮಾಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ನನ್ನ ಕರೆದಿದ್ದರು ಬಂದಿದ್ದೇನೆ ಎಂದು ಅಭಿಪ್ರಾಯಪಟ್ಟರು.
ಈ ಪ್ರಕರಣದ ಸಂಬಂಧ ಸುದೀರ್ಘವಾಗಿ ಮಾತನಾಡಲು ನಾಳೆ ಬೆಳಗ್ಗೆ 11 ಗಂಟೆಗೆ ಜೆ.ಪಿ ಭವನದಲ್ಲಿ ಸುದ್ದಿಗೋಷ್ಠಿ ಕರೆದಿದ್ದು, ಡಿನೋಟಿಫಿಕೇಷನ್ ಆರೋಪದ ಬಗ್ಗೆ ದಾಖಲೆ ಬಿಡುಗಡೆ ಮಾಡುವ ಸಾಧ್ಯತೆಗಳಿವೆ.
ದೆಹಲಿಯಿಂದ ನೇರವಾಗಿ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದ ಎಚ್ಡಿಕೆ
ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಆಗಮಿಸಿದ್ದಾರೆ. ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಹೆಚ್ಡಿ ಕುಮಾರಸ್ವಾಮಿಗೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ನೀಡಲಾಗಿತ್ತು. ಆದರೆ ಸೋಮವಾರ ಬೇರೆ ಕೆಲಸವಿರುವುದರಿಂದ ಇಂದೇ ವಿಚಾರಣೆಗೆ ಬರುವುದಾಗಿ ತಿಳಿಸಿದ್ದರು.
SCSP TSP Scheme: ರಾಷ್ಟ್ರಮಟ್ಟದಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಜಾರಿಗೆ ತನ್ನಿ: ಮೋದಿಗೆ ಸಿಎಂ ಸವಾಲು