More

    ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ: ಜಿ.ಎಸ್.ಸಂಗ್ರೇಶಿ ಮೆಚ್ಚುಗೆ

    ತುಮಕೂರು: ಪೊಲೀಸರು ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ನಾವೆಲ್ಲರೂ ಸುಭಿಕ್ಷವಾಗಿ, ಸುರಕ್ಷಿತವಾಗಿ ಇದ್ದೇವೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಜಿ.ಎಸ್.ಸಂಗ್ರೇಶಿ ಹೇಳಿದರು.

    ನಗರದ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬುಧವಾರ ಪೊಲೀಸ್ ಹುತಾತ್ಮರ ದಿನಾಚರಣೆ ಪ್ರಯುಕ್ತ ಹುತಾತ್ಮ ಪೊಲೀಸರ ಸ್ಮಾರಕದ ಪುತ್ಥಳಿಗೆ ಪುಷ್ಪಗುಚ್ಛದೊಂದಿಗೆ ಗೌರವ ಸಲ್ಲಿಸಿ ಮಾತನಾಡಿದ ಅವರು, ಗಡಿಯಲ್ಲಿ ನಿಂತು ಸೈನಿಕರು ದೇಶ ರಕ್ಷಣ ಮಾಡಿದೆ, ದೇಶದೊಳಗೆ ನಾಗರಿಕರ ಹಿತವನ್ನು ಕಾಪಾಡುವುದು ಪೊಲೀಸರು. ಹಾಗಾಗಿ, ಅವರ ಕರ್ತವ್ಯ, ಸಮಯಪ್ರಜ್ಞೆ ಮಾದರಿ ಎಂದರು.

    ಈ ದೇಶದ ರಕ್ಷಣೆಗಾಗಿ, ಕಾನೂನು ಸುವ್ಯವಸ್ಥೆಗಾಗಿ, ಜನರ ಸಂರಕ್ಷಣೆಗಾಗಿ ತಮ್ಮ ಜೀವವನ್ನೇ ಪೊಲೀಸರು ಪಣಕ್ಕೊಡಿದ್ದಾರೆ. ಹುತಾತ್ಮ ದಿನಾಚರಣೆ ಸಂದರ್ಭದಲ್ಲಿ ಅವರೆಲ್ಲರನ್ನೂ ನಾವು ಸ್ಮರಿಸೋಣ. ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ. ಜನಸಾಮಾನ್ಯರು ಪ್ರತಿನಿತ್ಯ ಸಣ್ಣಪುಟ್ಟ ವಿಚಾರಗಳಿಗೆ ನ್ಯಾಯಕ್ಕಾಗಿ ಠಾಣೆ ಮೆಟ್ಟಿಲೇರುವುದು ಸಾಮಾನ್ಯ. ರಾತ್ರಿ ವೇಳೆ ಜನರು ನೆಮ್ಮದಿಯಿಂದ ನಿದ್ದೆ ಮಾಡಲು ನಮ್ಮ ಪೊಲೀಸರು ಕಾರಣ. ಪ್ರತಿನಿತ್ಯ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟ ಹಾಕುವಲ್ಲಿ ಪೊಲೀಸರ ಶ್ರಮ ದೊಡ್ಡದಿದೆ ಎಂದರು.
    ಕಾರ್ಯಕ್ರಮದಲ್ಲಿ ಎಎಸ್ಪಿ ಟಿ.ಜೆ.ಉದೇಶ್, ಡಿವೈಎಸ್ಪಿ ತಿಪ್ಪೇಸ್ವಾಮಿ, ಡಿಸಿಐಬಿ ಡಿವೈಎಸ್ಪಿ ಸೂರ್ಯನಾರಾಯಣ, ಮಧುಗಿರಿ ಡಿವೈಎಸ್ಪಿ ಪ್ರವೀಣ್‌ಕುಮಾರ್, ಶಿರಾ ಗ್ರಾಮಾಂತರ ಡಿವೈಎಸ್ಪಿ ಕುಮಾರಪ್ಪ ಸೇರಿ ಇದ್ದರು.

    ದೂರುದಾರರೊಂದಿಗೆ ಸಕಾರಾತ್ಮಕವಾಗಿ ಸ್ಪಂದಿಸಿ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನಾವು ಪೊಲೀಸ್ ಹುತಾತ್ಮ ದಿನಾಚರಣೆ ಆಚರಿಸುತ್ತಿದ್ದೇವೆ. ಈ ಬಾರಿ ಕರೊನಾ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸುತ್ತಿದ್ದು ನಮ್ಮ ದೇಶದಲ್ಲಿ ಈ ವರ್ಷ 264 ಪೊಲೀಸ್ ಜನ ಅಧಿಕಾರಿಗಳು ಹಾಗೂ ಸಿಬ್ಬಂದಿ ಕರ್ತವ್ಯದ ವೇಳೆ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಹೇಳಿದರು. ಸಮಾಜದಲ್ಲಿ ಶಾಂತಿ ನೆಲೆಸಲು ಪೊಲೀಸರ ಪ್ರಾಮಾಣಿಕವಾಗಿ ತಮ್ಮ ಕರ್ತವ್ಯ ಅತಿ ನಿರ್ವಹಿಸುವುದು ಮುಖ್ಯ. ಠಾಣೆಗೆ ದೂರು ತರುವವರು ನೊಂದು ಬಂದಿರುತ್ತಾರೆ. ಅವರಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಯತ್ನಿಸಲಾಗುತ್ತಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts